ನವದೆಹಲಿ: ಕೇಂದ್ರ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ ₹5300 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಗೃಹ ಸಚಿವ ಅಮಿತ್ ಶಾ ಅವರಿಗೆ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಮನವಿ ಮಾಡಿದರು.

ಸಂಸತ್ ಭವನದಲ್ಲಿ ಸೋಮವಾರ ಗೃಹ ಸಚಿವರನ್ನು ಭೇಟಿ ಮಾಡಿದ ಅವರು, ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳನ್ನು ಚರ್ಚಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಜಾರಿಯಾದಲ್ಲಿ ಚಿತ್ರದುರ್ಗ ಸೇರಿದಂತೆ ಮಧ್ಯ ಕರ್ನಾಟಕದ ಹಲವು ಜಿಲ್ಲೆಗಳ ರೈತರಿಗೆ ಪ್ರಯೋಜನವಾಗಲಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಹೆಚ್ಚುವರಿ ಏಕಲವ್ಯ ಮಾದರಿ ವಸತಿ ಶಾಲೆ ಸ್ಥಾಪಿಸಲು ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಶಿಫಾರಸು ಮಾಡಬೇಕು ಎಂದು ಅವರು ಕೋರಿದರು.

ವೀರ ಮದಕರಿ ನಾಯಕ ಸ್ಮರಣಾರ್ಥ ಚಿತ್ರದುರ್ಗದಲ್ಲಿ ಮದಕರಿ ನಾಯಕ ಥೀಮ್ ಪಾರ್ಕ್ ಸ್ಥಾಪನೆ ಮಾಡಬೇಕು. ಈ ಯೋಜನೆ ಜಾರಿಯಾದಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತೇಜನ ದೊರೆಯಲಿದೆ ಎಂದು ಅವರು ಗಮನ ಸೆಳೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.