ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಗತ್ ಸಿಂಗ್‌ ಹುತಾತ್ಮ ದಿನ ಆಚರಣೆ

Last Updated 23 ಮಾರ್ಚ್ 2021, 12:54 IST
ಅಕ್ಷರ ಗಾತ್ರ

ಬೆಂಗಳೂರು: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್‌ಸಿಂಗ್‌, ಸುಖ್‌ದೇವ್‌ ಹಾಗೂ ರಾಜ್‌ಗುರು ಅವರ 91ನೇ ಹುತಾತ್ಮ ದಿನವನ್ನು ಮಂಗಳವಾರ ಆಚರಿಸಲಾಯಿತು.

‘ಹುತಾತ್ಮ ದಿನದ ಅಂಗವಾಗಿ ಕಾಲೇಜು ಹಾಗೂ ವಿವಿಧ ಬಡಾವಣೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಗತ್‌ ಸಿಂಗ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಜೊತೆಗೆ ಅವರ ಜೀವನ ಮತ್ತು ಹೋರಾಟದ ಹಾದಿಯ ಕುರಿತು ಚರ್ಚೆ ಏರ್ಪಡಿಸಲಾಗಿತ್ತು. ಮೈಸೂರು ಬ್ಯಾಂಕ್ ವೃತ್ತದಲ್ಲಿ ಈ ಮಹಾನ್‌ ಚೇತನರ ಕುರಿತ ಸೂಕ್ತಿ ಹಾಗೂ ಛಾಯಾಚಿತ್ರ ಪ್ರದರ್ಶನ ಮತ್ತು ಪುಸ್ತಕ ಮಾರಾಟ ಹಮ್ಮಿಕೊಳ್ಳಲಾಗಿತ್ತು. ಆ ಮೂಲಕ ಅವರ ವಿಚಾರಧಾರೆಗಳನ್ನು ಎಲ್ಲಾ ವರ್ಗದವರಿಗೂ ಪಸರಿಸುವ ಕೆಲಸ ಮಾಡಿದ್ದೇವೆ’ ಎಂದು ಸಂಘಟನೆಯ ಕಾರ್ಯದರ್ಶಿ ಎ.ಶಾಂತ ಹೇಳಿದರು.

ಸದಸ್ಯರಾದ ರುಕ್ಮಿಣಿ ಹಾಗೂ ಸಿಂಧೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT