ಮೈಸೂರು: ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರಿಗೆ ಬಂಧನ ಭೀತಿ ಎದುರಾಗಿದೆ.

ಇವರ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ಹಾಗೂ ಅವಹೇಳನ ಮಾಡಿರುವ ಕುರಿತು ಐಪಿಸಿ ಸೆಕ್ಷನ್ 295(ಎ) ಅಡಿ ಪ್ರಕರಣ ದಾಖಲಾಗಿದೆ. ಹಿರಿಯ ಅಧಿಕಾರಿಗಳು ಸೂಚಿಸಿದರೆ ಕೂಡಲೇ ಬಂಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಒಂದು ಬಾರಿ ಭಗವಾನ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮುಂದೆ ಕೈಗೊಳ್ಳಬೇಕಿರುವ ಕ್ರಮದ ಕುರಿತು ಕಾನೂನು ತಜ್ಞರ ಸಲಹೆ ಕೇಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಗವಾನ್ ಅವರು ಈಚೆಗೆ ಪ್ರಕಟಿಸಿದ ‘ರಾಮ ಮಂದಿರ ಏಕೆ ಬೇಡ?’ ಎಂಬ ತಮ್ಮ ಪುಸ್ತಕದಲ್ಲಿ ‘ರಾಮ ಮದ್ಯಪಾನ ಮಾಡುತ್ತಿದ್ದ, ಮಾಂಸ ತಿನ್ನುತ್ತಿದ್ದ’ ಎಂದು ಬರೆದಿದ್ದರು. ಈ ಬರಹವು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಹಾಗೂ ಅವಹೇಳನ ಮಾಡಿದೆ ಎಂದು ಹಿಂದೂ ಜಾಗರಣಾ ವೇದಿಕೆ ಜಗದೀಶ್ ಹೆಬ್ಬಾಳ್ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.