ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಿದೆ: ಸಿಎಂ ಸಿದ್ದರಾಮಯ್ಯ

Published 7 ಸೆಪ್ಟೆಂಬರ್ 2023, 10:24 IST
Last Updated 7 ಸೆಪ್ಟೆಂಬರ್ 2023, 10:24 IST
ಅಕ್ಷರ ಗಾತ್ರ

ಬೆಂಗಳೂರು: ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ್ದ ಭಾರತ್ ಜೋಡೊ ಯಾತ್ರೆ ಒಂದನೇ ವಾರ್ಷಿಕೋತ್ಸವದ ಅಂಗವಾಗಿ ‘ಎಕ್ಸ್’ನಲ್ಲಿ ಸರಣಿ ಪೋಸ್ಟ್‌ಗಳನ್ನು ಮಾಡಿರುವ ಅವರು, ದೇಶ ಉಳಿಸುವ ಕರೆಗೆ ನಾವೆಲ್ಲಾ ಓಗೊಡಬೇಕಾಗಿದೆ ಎಂದು ಹೇಳಿದ್ದಾರೆ.

‘ಇದು ನಾವೆಲ್ಲ ಕೈಕಟ್ಟಿ ತೆಪ್ಪಗೆ ಕೂರುವ ಕಾಲ ಅಲ್ಲ. ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ದೇಶದ ಸಂಪತ್ತಿನ ಲೂಟಿಯನ್ನು ತಡೆಯಲು, ಸಂವಿಧಾನದ ಗೌರವವನ್ನು ಕಾಪಾಡಲು, ನಮ್ಮ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

‘ಈ ಹೋರಾಟಕ್ಕೆ ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್, ಪಂಡಿತ ಜವಾಹರಲಾಲ ನೆಹರೂ, ಮೌಲಾನ ಅಬುಲ್ ಕಲಮ್ ಆಜಾದ್, ವಲ್ಲಭಭಾಯಿ ಪಟೇಲ್, ಇಂದಿರಾಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ಹಿರಿಯ ಚೇತನಗಳು ನಡೆಸಿದ ಹೋರಾಟ ಸ್ಪೂರ್ತಿಯಾಗಬೇಕು’ ಎಂದು ಅವರು ಹೇಳಿದ್ದಾರೆ.

ಬನ್ನಿ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಮುನ್ನಡೆಯೋಣ, ಕೈಗೆ ಕೈ ಜೋಡಿಸಿ ಹೋರಾಟಕ್ಕೆ ಬಲ ತುಂಬೋಣ. ಒಡೆಯುವವರನ್ನು ಹಿಮ್ಮೆಟ್ಟಿಸಿ ಕಟ್ಟುವ ಕಾಯಕದಲ್ಲಿ ತೊಡಗಿಸೋಣ. ನವಕರ್ನಾಟಕವನ್ನೊಳಗೊಂಡ ನವಭಾರತವನ್ನು ನಿರ್ಮಿಸೋಣ ಎಂದು ಅವರು ಕರೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT