ಮೈಸೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ ಸಿಗುತ್ತಿರುವ ಸ್ಪಂದನೆ ನೋಡಿ ಬಿಜೆಪಿಯವರಿಗೆ ಭಯಬಂದಿದೆ. ಹತಾಶೆಯಿಂದ ಏನೇನೋ ಮಾತನಾಡುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಪಾದಯಾತ್ರೆ ನಡುವೆ ನಂಜನಗೂಡು ತಾಲ್ಲೂಕಿನ ಕಳಲೆ ಗೇಟ್ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

'ಭಾರತೀಯ ಜನತಾ ಪಕ್ಷದವರು ಯಾವತ್ತೂ ಬಾಬಹೇಬ್ ಅಂಬೇಡ್ಕರ್ ರಚನೆ ಮಾಡಿರುವ ಸಂವಿಧಾನದಲ್ಲಿ ಆಗಲಿ, ವ್ಯಕ್ತಿ ಸ್ವಾತಂತ್ರ್ಯ, ಮೂಲಭೂತ ಸ್ವಾತಂತ್ರ್ಯದಲ್ಲಿ ಆಗಲಿ ನಂಬಿಕೆ ಇಟ್ಟುಕೊಂಡವರಲ್ಲ. ಸಂವಿಧಾನ ರಚನೆಯಾಗಿ ಅಂಗೀಕಾರವಾದ ದಿನದಿಂದಲೂ ಅವರು ಸಂವಿಧಾನವನ್ನು ವಿರೋಧ ಮಾಡುತ್ತಲೇ ಬಂದಿದ್ದಾರೆ. ಇಂದು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಸಮಾಜಮುಖಿ ಚಿಂತಕರು, ಬರಹಗಾರರು ರಾಹುಲ್ ಗಾಂಧಿ ಜೊತೆಗಿನ ಸಂವಾದದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ' ಎಂದರು.

'ಸಂವಿಧಾನಾತ್ಮಕವಾಗಿ ದೊರೆತಿರುವ ವಾಕ್ ಸ್ವಾತಂತ್ರ್ಯವನ್ನು ಇಂದು ಕಿತ್ತುಕೊಳ್ಳಲಾಗಿದೆ. ಸಂವಿಧಾನದ ಪೀಠಿಕೆಯಲ್ಲೇ ಮಾನವ ಹಕ್ಕುಗಳು ಇರಬೇಕು ಎಂದು ನಾವೇ ತೀರ್ಮಾನ ಮಾಡಿಕೊಂಡಿದ್ದು. ಇಂದು ಸರ್ಕಾರದ ನೀತಿ ನಿರ್ಧಾರಗಳನ್ನು ಪ್ರಶ್ನೆ ಮಾಡಿದರೆ ಅವರ ವಿರುದ್ಧ ಮೊಕದ್ದಮೆ ದಾಖಲಿಸಿ ಜೈಲಿಗೆ ಹಾಕುವುದು, ಅವರ ಮೇಲೆ ಇ.ಡಿ, ಸಿಬಿಐಗಳನ್ನು ಛೂ ಬಿಡುವುದು ಮಾಡುತ್ತಿದ್ದಾರೆ. ಈ ಬಗ್ಗೆ ಎಲ್ಲರಿಂದ ಆತಂಕ ವ್ಯಕ್ತವಾಗುತ್ತಿದೆ' ಎಂದರು.

'ರಾಹುಲ್ ಗಾಂಧಿ ಅವರು ಭಾರತ ಐಕ್ಯತಾ ಯಾತ್ರೆ ಹಮ್ಮಿಕೊಂಡಿರುವುದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶಕ್ಕಲ್ಲ. ಜನರಲ್ಲಿ ಭಯ, ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ, ಈ ಜನರಿಗೆ ಆತ್ಮಸ್ಥೈರ್ಯ ತುಂಬಬೇಕು ಎಂಬ ಕಾರಣಕ್ಕೆ. ಭಾರತ ಐಕ್ಯತಾ ಯಾತ್ರೆಗೆ ನಮ್ಮ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ. ಯಾತ್ರೆಗೆ ಸಂಘ ಸಂಸ್ಥೆಗಳು, ವಿಚಾರವಂತರು, ಚಿಂತಕರು, ಬರಹಗಾರರು, ಹೀಗೆ ಎಲ್ಲ ವರ್ಗದ ಜನರು ಭಾಗವಹಿಸುತ್ತಿದ್ದಾರೆ. ಈ ಜನರ ಅಭಿಪ್ರಾಯ ಸಂಗ್ರಹಿಸಲು ರಾಹುಲ್ ಗಾಂಧಿ ಅವರು ಸಂವಹನ ಸಭೆಗಳನ್ನು ನಡೆಸುತ್ತಿದ್ದಾರೆ' ಎಂದರು.

'ಶುಕ್ರವಾರ ಆದಿವಾಸಿಗಳು, ಜನರ ಜೊತೆ, ಕೊರೊನಾ ಕಾಲದಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಸಿಗದೆ ಸಾವಿಗೀಡಾದ 36 ಜನರ ಕುಟುಂಬಗಳ ಜೊತೆ ಮಾತುಕತೆ ನಡೆಸಿದ್ದಾರೆ. ಈ 36 ಜನರನ್ನು ಸರ್ಕಾರವೇ ಕೊಲೆ ಮಾಡಿದ್ದು, ಅವರಿಗೆ ಸಕಾಲದಲ್ಲಿ ಆಮ್ಲಜನಕ, ವೆಂಟಿಲೇಟರ್, ವೈದ್ಯರು ಹೀಗೆ ಅಗತ್ಯ ಚಿಕಿತ್ಸೆ ಸಿಕ್ಕಿದ್ದರೆ ಈ ಎಲ್ಲರೂ ಬದುಕುಳಿಯುತ್ತಿದ್ದರು. ಆರೋಗ್ಯ ಮಂತ್ರಿ ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ವೈದ್ಯರ ಜೊತೆ ಸಭೆ ನಡೆಸಿ ಸತ್ತವರು ಮೂರೇ ಮಂದಿ ಎಂದು ಸುಳ್ಳು ಹೇಳಿದ್ದರು. ಇವರು ಎಂಥಾ ಕುತಂತ್ರಿಗಳು ಎಂಬುದು ಇದರಲ್ಲೇ ಗೊತ್ತಾಗುತ್ತದೆ. ಸತ್ತವರ ಸಂಬಂಧಿಕರಿಗೆ, ಕುಟುಂಬದವರಿಗೆ ತಮ್ಮವರ ಸಾವಿಗೆ ನಿಜ ಕಾರಣ ಏನು ಎಂಬುದು ಗೊತ್ತಿದೆ. ಆದರೂ ಹೀಗೆ ಸುಳ್ಳು ಹೇಳಿದ್ದರು' ಎಂದು ಆರೋಪಿಸಿದರು.

ಸತ್ತವರಲ್ಲಿ ಬಹುತೇಕರು ಕುಟುಂಬಕ್ಕೆ ಆದಾಯದ ಮೂಲವಾಗಿದ್ದವರು. ಒಬ್ಬ ಮೃತನ ಕುಟುಂಬದಲ್ಲಿ ಇಬ್ಬರು ಚಿಕ್ಕ ಮಕ್ಕಳಿದ್ದಾರೆ, ಮೃತನ ಹೆಂಡತಿ ಈಗ ಮಕ್ಕಳನ್ನು ಶಾಲೆಗೆ ಕಳಿಸಬೇಕು, ಕೂಲಿ ಮಾಡಿ ಜೀವನ ನಿರ್ವಹಣೆ ಮಾಡಬೇಕು. ಇದೆಲ್ಲಾ ಸಾಧ್ಯವೇ? ಇದಕ್ಕೆ ರಾಜ್ಯ ಸರ್ಕಾರವೇ ಹೊಣೆ ಅಲ್ಲವಾ? ಎಂದು ಕೇಳಿದರು.

ಸರ್ಕಾರ ಈ ದುರಂತದಲ್ಲಿ ಮಡಿದವರಿಗೆ ಪರಿಹಾರ ನೀಡಿಲ್ಲ. ಮೃತರ ಕುಟುಂಬದವರು ನೀಡಿದ್ದ ಅರ್ಜಿಯನ್ನು ಕೂಡ ಈ ವ್ಯಕ್ತಿ ಆಮ್ಲಜನಕ ಕೊರತೆಯಿಂದ ಸತ್ತಿಲ್ಲ ಎಂದು ಹೇಳಿ ತಿರಸ್ಕಾರ ಮಾಡಲಾಗಿದೆ. ನಾನು ಮತ್ತು ಡಿ.ಕೆ ಶಿವಕುಮಾರ್ ಅವರು ದುರಂತ ಸಂಭವಿಸಿದ ವೇಳೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೆವು. ಆ ವೇಳೆ ಎಲ್ಲ ಅಧಿಕಾರಿಗಳು 36 ಜನರ ಸಾವಿಗೆ ಆಮ್ಲಜನಕದ ಕೊರತೆ ಕಾರಣ ಎಂದು ಒಪ್ಪಿಕೊಂಡಿದ್ದರು. ಆರೋಗ್ಯ ಸಚಿವ ಸುಧಾಕರ್ ಅವರು ಇವರ ಧ್ವನಿಯನ್ನು ಹತ್ತಿಕ್ಕುತ್ತಿದ್ದಾರೆ. ಇದು ಕೇವಲ ಒಂದು ಉದಾಹರಣೆ ಮಾತ್ರ ಎಂದರು.

ನಮ್ಮ ಪಾದಯಾತ್ರೆ ಕಂಡು ಬಿಜೆಪಿ ಅವರಿಗೆ ಹತಾಶೆ ಕಾಡುತ್ತಿದೆ. ಇದೇ ಕಾರಣಕ್ಕೆ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇವರ ಹತಾಶೆ ಎಷ್ಟಿದೆ ಎಂದರೆ ಇಂದು ಕೆಲವು ಪತ್ರಿಕೆಗಳಲ್ಲಿ ಜಾಹಿರಾತು ನೀಡಿ ದೇಶ ವಿಭಜನೆಗೆ ನೆಹರು ಕಾರಣ, ಅವರ ಮೊಮ್ಮಗನ ಮಗ ಈಗ ಪಾದಯಾತ್ರೆ ಮಾಡುತ್ತಿದ್ದಾರೆ. ಇದು ವಿಪರ್ಯಾಸ ಎಂದು ತಲೆಬುಡವಿಲ್ಲದೆ ಆರೋಪ ಮಾಡುತ್ತಿದ್ದಾರೆ. 1937ರಲ್ಲಿ ಹಿಂದೂ ಮಹಾಸಭಾದ ಅಧ್ಯಕ್ಷರಾಗಿದ್ದ ಸಾವರ್ಕರ್ ಅವರು ಹಿಂದೂ ಮತ್ತು ಮುಸ್ಲಿಂಮರನ್ನು ಒಳಗೊಂಡ ಭಾರತ ಒಂದು ದೇಶವಾಗಿ ಇರಲು ಸಾಧ್ಯವಿಲ್ಲ, ಇಲ್ಲಿ ಹಿಂದೂ ಮತ್ತು ಮುಸ್ಲಿಂಮರು ಒಟ್ಟಾಗಿ ವಾಸವಿರಲು ಸಾದ್ಯವಿಲ್ಲ, ದೇಶ ವಿಭಜನೆ ಆಗಲೇಬೇಕು ಎಂದು ಹೇಳಿದ್ದರು. ಇಂಥವರು ನಮಗೆ ಪಾಠ ಮಾಡಲು ಬರುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷ ಭಾರತವನ್ನು ಒಟ್ಟುಗೂಡಿಸಿದೆ. 600ಕ್ಕೂ ಅಧಿಕ ಸಣ್ಣ ಪುಟ್ಟ ರಾಜ್ಯಗಳನ್ನು ಒಟ್ಟುಗೂಡಿಸಿ ಒಂದು ದೇಶ ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಪಕ್ಷ. ಆರ್,ಎಸ್,ಎಸ್ ನ ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರಾ? ಒಂದು ಹೆಸರು ಹೇಳಿ ಸಾಕು. ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದಾರ? ನೆಹರೂ ಕುಟುಂಬ ಈ ದೇಶಕ್ಕಾಗಿ ಬೇಕಾದಷ್ಟು ತ್ಯಾಗ ಬಲಿದಾನ ಮಾಡಿದೆ. ಇಂದಿರಾ ಗಾಂಧಿಯವರನ್ನು ಯಾಕೆ ಗುಂಡು ಹೊಡೆದು ಕೊಂದರು? ರಾಜೀವ್ ಗಾಂಧಿ ಅವರನ್ನು ಯಾಕೆ ಹತ್ಯೆ ಮಾಡಿದರು? ನೆಹರು 9 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದು ಯಾಕೆ? ಅವರೇನು ಅಮಿತ್ ಶಾ ಅವರಂತೆ ತಮ್ಮ ಸ್ವಂತ ಅಪರಾಧಕ್ಕಾಗಿ ಜೈಲು ಸೇರಿದ್ದರಾ? ದೇಶಕ್ಕಾಗಿ ಅಲ್ಲವೇ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಜನರನ್ನು ದಾರಿ ತಪ್ಪಿಸುವುದೇ ದೊಡ್ಡ ಕೆಲಸವಾಗಿದೆ. ಬಿಜೆಪಿ ಒಂದು ಸುಳ್ಳು ಉತ್ಪಾದಕ ಕಾರ್ಖಾನೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ನಮ್ಮ ಪಾದಯಾತ್ರೆಗೆ ಅದ್ಭುತವಾದ ಜನಸ್ಪಂದನೆ ವ್ಯಕ್ತವಾಗುತ್ತಿದೆ. ಇಷ್ಟು ಬೃಹತ್ ಪ್ರಮಾಣದ ಸ್ಪಂದನೆಯನ್ನು ನಾವೂ ಕೂಡ ನಿರೀಕ್ಷೆ ಮಾಡಿರಲಿಲ್ಲ. ಇದರಿಂದ ವಿಚಲಿತರಾಗಿ ಜನರಿಗೆ ತಪ್ಪು ಮಾಹಿತಿ ಕೊಡುವುದು, ಸುಳ್ಳು ಜಾಹಿರಾತು ನೀಡುವುದನ್ನು ಬಿಜೆಪಿ ಅವರು ಮಾಡುತ್ತಿದ್ದಾರೆ. ಇಂಥಾ ಹಲವು ಸುಳ್ಳುಗಳನ್ನು ಹಿಂದೆಯೂ ಹೇಳಿದ್ದಾರೆ. ಅದರ ಜೊತೆಗೆ ಇದೂ ಒಂದು ಸುಳ್ಳು ಎಂದರು.

ರಾಹುಲ್ ಗಾಂಧಿ ಅವರು ಐತಿಹಾಸಿಕ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ದೇಶದಲ್ಲಿ 150ಕ್ಕೂ ಹೆಚ್ಚು ದಿನಗಳ ಕಾಲ 3570 ಕಿ.ಮೀ ಕ್ರಮಿಸಲಿದ್ದಾರೆ. ಕರ್ನಾಟಕದಲ್ಲಿ 510 ಕಿ.ಮೀ ಪಾದಯಾತ್ರೆ ಮಾಡಲಿದ್ದಾರೆ. ಈ ಪಾದಯಾತ್ರೆಗೆ ಕೇರಳ, ತಮಿಳುನಾಡು, ಕರ್ನಾಟಕದಲ್ಲಿ ಅದ್ಭುತವಾದ ಸ್ಪಂದನೆ ಸಿಕ್ಕಿದೆ. ಬಹುಶಃ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಇದೇ ರೀತಿ ಸ್ಪಂದನೆ ಸಿಗುತ್ತದೆ ಎಂದು ಬಿಜೆಪಿಗೆ ಭಯ ಶುರುವಾಗಿದೆ. ದೇಶದ ಜನರ ಅಭಿಪ್ರಾಯ ಬದಲಾಗುತ್ತಿದೆ, ಜನ ಭಯದಿಂದ ಹೊರಬರುತ್ತಿದ್ದಾರೆ. ಹೀಗಾಗಿ ಬಿಜೆಪಿ ನಮ್ಮ ವಿರುದ್ಧ ಅಪಪ್ರಚಾರ ಮಾಡಲು ಆರಂಭಿಸಿದೆ ಎಂದು ದೂರಿದರು.

ಮಾಂಸಹಾರ ಮಾಡುವುದು ಕೆಟ್ಟದ್ದಕ್ಕೆ ದಾರಿಯಾಗುತ್ತದೆ ಎಂಬ ಮೋಹನ್ ಭಾಗವತ್ ಅವರ ಮಾತಿಗೆ ಪ್ರತಿಕ್ರಿಯಿಸಿ, ದೇಶದಲ್ಲಿ ಶೇ 80ರಷ್ಟು ಜನ ಮಾಂಸಹಾರಿಗಳು ಇದ್ದಾರೆ. ಮಾಂಸಹಾರ ಇವತ್ತು ನಿನ್ನೆಯದಲ್ಲ. ಮೋಹನ್ ಭಾಗವತ್ ಹುಟ್ಟುವ ಮೊದಲಿನಿಂದಲೂ ಅಂದರೆ ಪುರಾತನ ಕಾಲದಿಂದಲೂ ಜನ ಮಾಂಸಹಾರ ಸೇವನೆ ಮಾಡುತ್ತಿದ್ದಾರೆ ಎಂದರು.

ಸರ್ಕಾರ ಪೊಲೀಸನವರನ್ನು ಛೂ ಬಿಟ್ಟಿದೆ. ನಾನು, ಡಿ.ಕೆ. ಶಿವಕುಮಾರ್ ಹಾಗೂ ಸುರ್ಜೇವಾಲಾ ಅವರು ಪೇ ಸಿಎಂ ಪೋಸ್ಟರ್ ಅಂಟಿಸಿದ್ದಕ್ಕೆ ನಮ್ಮ ಮೇಲೆ ಕೇಸ್ ಹಾಕಿದ್ದಾರೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂದರು.

ಚಾಮರಾಜನಗರದಲ್ಲಿ 36 ಜನ ಆಮ್ಲಜನಕ ಸಿಗದೆ ಸಾವಿಗೀಡಾದ ವಿಚಾರವನ್ನು ಸದನದಲ್ಲಿಯೂ ನಾನು, ಶಿವಕುಮಾರ್ ಅವರು ಪ್ರಸ್ತಾಪ ಮಾಡಿದ್ದೆವು. ಅಲ್ಲಿ ಕೂಡ ಸರ್ಕಾರ ಸುಳ್ಳು ಉತ್ತರ ನೀಡಿತ್ತು. ಈ ಬಗ್ಗೆ ಸಂಸತ್ತಿನಲ್ಲೂ ಸರ್ಕಾರ ಸುಳ್ಳು ಹೇಳಿದೆ ಎಂದು ಆರೋಪಿಸಿದರು.

ಶೇ 40ರಷ್ಟು ಕಮಿಷನ್ ಆರೋಪ ಮಾಡಿರುವುದು ಗುತ್ತಿಗೆದಾರರ ಸಂಘದವರು. ಅಧ್ಯಕ್ಷ ಕೆಂಪಣ್ಣ ಪ್ರಧಾನಿಗೆ ಪತ್ರ ಬರೆದು ರಾಜ್ಯದಲ್ಲಿ ಶೇ 40ರಷ್ಟು ಕಮಿಷನ್ ನಡೆಯುತ್ತಿದ್ದು, ಇದರಿಂದ ನಮಗೆ ಕಿರುಕುಳ ಆಗುತ್ತಿದೆ. ದಯವಿಟ್ಟು ತಪ್ಪಿಸಿ ಎಂದು ಮನವಿ ಮಾಡಿದ್ದರು. ಆ ನಂತರ ರಾಜ್ಯಪಾಲರಿಗೆ, ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಈಗ ಸರ್ಕಾರ ನಮಗೆ ದಾಖಲಾತಿ ಕೊಡಿ ಎಂದು ಹೇಳುತ್ತಿದೆ. ನರೇಂದ್ರ ಮೋದಿ ಅವರು 2018 ರ ಮಾರ್ಚ್ ನಲ್ಲಿ ಬೆಂಗಳೂರಿನಲ್ಲಿ ಭಾಷಣ ಮಾಡುವಾಗ ಸಿದ್ದರಾಮಯ್ಯ ಅವರ ಸರ್ಕಾರ ಶೇ 10 ಕಮಿಷನ್ ಸರ್ಕಾರ ಎಂದು ಹೇಳಿದ್ದರು. ಒಬ್ಬ ಪ್ರಧಾನಿಯಾಗಿ ಈ ರೀತಿ ಆಧಾರ ರಹಿತವಾಗಿ ರಾಜಕೀಯ ಭಾಷಣ ಮಾಡಬಹುದಾ? ಎಂದು ಗುಡುಗಿದರು.

ಗುತ್ತಿಗೆದಾರರು ತಾವು ಮಾಡಿರುವ ಆರೋಪ ಸಾಬೀತು ಮಾಡಲು ಸಾಧ್ಯವಿಲ್ಲ ಎಂದರೆ ಕಾನೂನು ಕ್ರಮ ಎದುರಿಸಲು ಸಿದ್ಧರಿದ್ದೇವೆ ಎಂದಿದ್ದಾರೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೊಡಿ. ಸತ್ಯ ಗೊತ್ತಾಗಲಿ. ನಮ್ಮ ಕಾಲದಲ್ಲಿ 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆವು. ಆಗ ಬಿಜೆಪಿ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿ ಇತ್ತು. ಈ ಸರ್ಕಾರ ಯಾಕೆ ತನಿಖೆಗೆ ಕೊಡಬಾರದು ಎಂದು ಪ್ರಶ್ನಿಸಿದರು .

ಅಧಿಕಾರಿ ಡಿ.ಕೆ.ರವಿ ಆತ್ಮಹತ್ಯೆ ಮಾಡಿಕೊಂಡ ವೇಳೆ ಗಲಾಟೆ ಮಾಡಿ, ಅವರ ತಂದೆ-ತಾಯಿಯನ್ನು ವಿಧಾನಸೌಧದ ಮುಂದೆ ಕೂರಿಸಿ ಪ್ರತಿಭಟನೆ ಮಾಡಿಸಿದ್ರು. ಆಗ ಅವರ ಪೋಷಕರ ಮನವಿಯಂತೆ ನಾನು ತಕ್ಷಣ ಸಿಇಐ ತನಿಖೆಗೆ ಒಪ್ಪಿಸಿದೆ. ಒಂದಂಕಿ ಲಾಟರಿ ಪ್ರಕರಣದಲ್ಲಿ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಆರೋಪ ಮಾಡಿದರು. ಅವರ ಬಳಿ ದಾಖಲೆ ಇಲ್ಲದಿದ್ರೂ ನಾನು ಡಿಐಜಿ ಅವರನ್ನು ಅಮಾನತು ಮಾಡಿ ಸಿಬಿಐ ತನಿಖೆಗೆ ವಹಿಸಿದ್ದೆ ಎಂದರು.

'ಜನರ ನಾಡಿ ಮಿಡಿತ ನೋಡಿ ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುತ್ತಿದ್ದೇವೆ. ಅಧಿಕಾರಕ್ಕೆ ಬಂದ ಮೇಲೆ ಏನು ಮಾಡುತ್ತೇವೆ ಎಂದು ಈಗಲೇ ಹೇಳೋದು ಸರಿಯಲ್ಲ. ಹಾಗೆ ಹೇಳಿದ್ರೆ ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದಂತಾಗುತ್ತದೆ. ನಿಮ್ಮ ಕಾಲದಲ್ಲೂ ಭ್ರಷ್ಟಾಚಾರ ನಡೆದಿಲ್ವಾ ಎಂದು ಬಿಜೆಪಿ ಅವರು ನಮ್ಮನ್ನು ಕೇಳುತ್ತಾರೆ. 2006 ರಿಂದ ಈ ವರೆಗಿನ ಎಲ್ಲವನ್ನೂ ನ್ಯಾಯಾಂಗ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.

ಅದಕ್ಕೆ ಬಿಜೆಪಿಯವರಿಗೆ ಧಮ್ ಇಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪವನ್ ಕೇರ, ಶಾಸಕ ಪ್ರಿಯಾಂಕ್ ಖರ್ಗೆ, ವಿಧಾನಪರಿಷತ್ ಸದಸ್ಯ ಸಲೀಂ ಅಹಮದ್, ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಇದ್ದರು.

ಇವನ್ನೂ ಓದಿ...

ಯಾತ್ರೆಗೆ ಸಿಗುತ್ತಿರುವ ಸ್ಪಂದನೆ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ: ಸಿದ್ದರಾಮಯ್ಯ

ನಾವೂ ಪೇಸಿಎಂ ಟಿ-ಶರ್ಟ್ ಧರಿಸಿ ಪಾಲ್ಗೊಳ್ಳುತ್ತೇವೆ, ಏನ್ಮಾಡ್ಕೊತಿರಾ?: ಡಿಕೆಶಿ

ಪೇಸಿಎಂ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಪೊಲೀಸರ ಹಲ್ಲೆ: ಸಿದ್ದರಾಮಯ್ಯ ಆಕ್ರೋಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.