ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೋದ ಎಲ್ಲಾ ಕಡೆಯಲ್ಲಿ ಕಾಂಗ್ರೆಸ್ ಸೋತಿದೆ. ಹಾಗಾಗಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ಶುಭ ಸೂಚನೆ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಭಾರತ್ ಜೋಡೊ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿರುವ ಅವರು, ‘ದೇಶದಲ್ಲಿ 55 ವರ್ಷ ಆಳ್ವಿಕೆ ನಡೆಸಿದ ಕಾಂಗ್ರೆಸ್‌ಗೆ ಅಸಮಾನತೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಪ್ರಧಾನಿ ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಎಲ್ಲರೂ ಬಡತನ ನಿರ್ಮೂಲನೆ ಕುರಿತು ಭಾಷಣ ಮಾಡಿದ್ದರು. ಆದರೆ ಸಾಧಿಸಿದ್ದು ಏನೂ ಇಲ್ಲ’ ಕಿಡಿಕಾರಿದ್ದಾರೆ.

‘ಕಾಂಗ್ರೆಸ್ಸಿಗರಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕಾರಣ ಅವರ ಪಕ್ಷದಲ್ಲೇ ಆಂತರಿಕ ಪ್ರಜಾಪ್ರಭುತ್ವ ಇಲ್ಲ. ಇದೀಗ ಎಐಸಿಸಿ ಅಧ್ಯಕ್ಷ ಚುನಾವಣೆ ಎಂಬ ನಾಟಕ ನಡೆಯುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಸ್ವಇಚ್ಛೆಯಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದಿಲ್ಲ. ಬದಲಾಗಿ ಗಾಂಧಿ ಕುಟುಂಬದವರ ಒಪ್ಪಿದರೆ ಮಾತ್ರ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ಇಂತಹ ದುರ್ದೈವ ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಬರಬಾರದು’ ಎಂದು ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಓದಿ...ಅನ್ನದಾತರ ಕಣ್ಣೀರ ಶಾಪ ಬಿಜೆಪಿಗೆ ತಟ್ಟದೆ ಇರುವುದಿಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.