ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಲಕ್ಷ್ಮಿ ಲೇಔಟ್‌ನಿಂದ ನಾಪತ್ತೆಯಾಗಿದ್ದ ಭಾರ್ಗವಿ ಗೋವಾದಲ್ಲಿ ಪತ್ತೆ

Last Updated 19 ಅಕ್ಟೋಬರ್ 2022, 21:35 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್‌ನಿಂದ ನಾಪತ್ತೆಯಾಗಿದ್ದ 14 ವರ್ಷದ ವಿದ್ಯಾರ್ಥಿನಿ ಭಾರ್ಗವಿ ಗೋವಾದ ಪಣಜಿಯಲ್ಲಿ ಬುಧವಾರ ಸಂಜೆ ಪತ್ತೆಯಾಗಿದ್ದಾಳೆ. ಅಲ್ಲಿನ ಪೊಲೀ ಸರು ಆಕೆಯನ್ನು ರಕ್ಷಿಸಿ ಸುರಕ್ಷಿತವಾಗಿ ಇರಿಸಿದ್ದಾರೆ. ಭಾರ್ಗವಿ ಕರೆತರಲು ಪೋಷಕರು ಗೋವಾಕ್ಕೆ ತೆರಳಿದ್ದಾರೆ.

ಮಹಾಲಕ್ಷ್ಮಿ ಲೇಔಟ್‌ನ ಶಾಲೆಯಲ್ಲಿ ಓದುತ್ತಿದ್ದಳು. ಅಂಕ ಕಡಿಮೆ ಬಂತು ಎನ್ನುವ ಕಾರಣಕ್ಕೆ 4 ದಿನಗಳ ಹಿಂದೆ ದಿಢೀರ್ ನಾಪತ್ತೆ ಆಗಿದ್ದಳು. ಇದರಿಂದ ಪೋಷಕರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.

‘ಬೆಂಗಳೂರಿನಿಂದ ಬಸ್‌ನಲ್ಲಿ ಒಬ್ಬಳೇ ಮಂಗಳೂರಿಗೆ ತೆರಳಿ ಅಲ್ಲಿ ಆಟೊದಲ್ಲಿ ಸಮುದ್ರ ತೀರಕ್ಕೆ ತೆರಳಿದ್ದಳು. ಸಮುದ್ರ ತೀರದಲ್ಲಿ ಕೆಲ ಸಮಯ ಕಾಲ ಕಳೆದು ಮತ್ತೆ ಆಟೊದಲ್ಲಿ ವಾಪಸ್‌ ಬಂದಿದ್ದಳು. ಆಟೊ ಚಾಲಕರಿಗೆ ಚಿಕ್ಕಮ್ಮನ ಮನೆಗೆ ತೆರಳುವುದಾಗಿ ತಿಳಿಸಿದ್ದಳು’ ಎಂದು ಮೂಲಗಳು ತಿಳಿಸಿವೆ.

ಮಂಗಳೂರಿನಿಂದ ಗೋವಾಕ್ಕೆ ತೆರಳಿದ್ದಳು. ಪಣಜಿಯಲ್ಲಿ ಒಬ್ಬಳೇ ಓಡಾಟ ನಡೆಸುವಾಗ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT