ನವದೆಹಲಿ: ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿ, ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಜಾಮೀನಿಗಾಗಿಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಪ್ರಕರಣದ 36 ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ನಂತರ ಜಾಮೀನು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಮೂರ್ತಿ ಎಸ್.ಎ. ಬೋಬಡೆ ನೇತೃತ್ವದ ಪೀಠ ತಿಳಿಸಿತು.

ಪ್ರಮುಖ ಆರೋಪಿ, ಹತ್ಯೆಗೀಡಾಗಿರುವ ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಳೆದ ಏಪ್ರಿಲ್ 23ರಂದು ವಜಾಗೊಳಿಸಿದ್ದ ಪೀಠವು, ಆರು ತಿಂಗಳೊಳಗೆ ಸಾಕ್ಷಿಗಳವಿಚಾರಣೆ ನಡೆಸುವಂತೆ ಅಧೀನ ನ್ಯಾಯಾಲಯಕ್ಕೆ ಸೂಚಿಸಿತ್ತು.

2016ರ ಜುಲೈ 28ರಂದು ಭಾಸ್ಕರ ಶೆಟ್ಟಿ ಅವರನ್ನು ಕೊಲೆ ಮಾಡಿ ಹೋಮಕುಂಡದಲ್ಲಿ ಹಾಕಿ ಸುಡಲಾಗಿತ್ತು. ಶೆಟ್ಟಿ ಅವರ ಪುತ್ರ ನವನೀತ್ ಶೆಟ್ಟಿ ಸಹ ಬಂಧನಕ್ಕೆ ಒಳಗಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.