ಭಟ್ಕಳ: ಪಟ್ಟಣದ ಬಂದರ ರಸ್ತೆಯಲ್ಲಿ ಅನಧಿಕೃತವಾಗಿ ಧರ್ಮದ ಬಾವುಟ ಹಾರಿಸಿದವರ ಮೇಲೆ ನಗರಸಭೆ ಅವರು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪಕ್ಷದಿಂದ ಹೋರಾಟ ನಡೆಸಲಾಗುವುದು’ ಎಂದು ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ ಹೇಳಿದರು.

ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಪಟ್ಟಣದ ಬಂದರ ರಸ್ತೆಯಲ್ಲಿ ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ಹಾಕಿದ್ದ ಧ್ವಜವನ್ನು ಹಬ್ಬ ಮುಗಿದ ಮೇಲೆ ನಗರಸಭೆಯವರು ತೆರವು ಮಾಡಿದ ಮೇಲೂ ಪುನಃ ಅದೇ ಸ್ಥಳದಲ್ಲಿ ಧ್ವಜವನ್ನು ಹಾರಿಸಲಾಗಿದೆ. ಈ ಕುರಿತು ಅಗತ್ಯ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕ ಕಾರ್ಯದರ್ಶಿ ಸುಬ್ರಾಯ ದೇವಾಡಿಗ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣೆ ಪ್ರಚಾರದಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿಯವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ’ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಘಟಕ ಉಪಾಧ್ಯಕ್ಷ ಈಶ್ವರ ನಾಯ್ಕ ಮಾತನಾಡಿದರು. ಬಿಜೆಪಿ ಭಟ್ಕಳ ಘಟಕ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯ್ಕ, ಕಾರ್ಯದರ್ಶಿ ಶ್ರೀನಿವಾಸ ನಾಯ್ಕ ಮೂಡಭಟ್ಕಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-20-784055429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.