ಬೆಂಗಳೂರು: ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಎಸ್. ರವಿಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದ ನಡುವೆಯೇ ರವಿಕುಮಾರ್ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
.ಶೇ 60ರಷ್ಟು ಲಂಚಕ್ಕೆ ಬೇಡಿಕೆ ಆರೋಪ: ಭೋವಿ ನಿಗಮಕ್ಕೆ ರವಿಕುಮಾರ್ ರಾಜೀನಾಮೆ?.
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ರವಿಕುಮಾರ್, ‘2024ರ ಮಾರ್ಚ್ 15ರಿಂದ ಭೋವಿ ನಿಗಮದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ನನ್ನ ಅವಧಿಯಲ್ಲಿ ನಿಗಮದಲ್ಲಿ ಯಾವುದೇ ಆಕ್ರಮಗಳು ನಡೆದಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಅಕ್ರಮಗಳ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವುದು ಸರಿಯಾಗಿದೆ. ನಿಗಮದಲ್ಲಿ ಹಿಂದಿನಿಂದ ನಡೆದುಕೊಂಡು ಬರುತ್ತಿದ್ದ ಕೆಲವು ಅನುಚಿತ ವ್ಯವಹಾರ ಮತ್ತು ಅಶಿಸ್ತನ್ನು ನಾನು ಪತ್ತೆ ಹಚ್ಚಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಕ್ಕೆ ನನ್ನ ವಿರುದ್ಧ ಪಿತೂರಿ ನಡೆದು ನನ್ನ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಳಿಕೊಳ್ಳುತ್ತೇನೆ’ ಎಂದಿದ್ದಾರೆ.

‘ಸೈಬರ್ ಪೊಲೀಸರು ಮತ್ತು ಎಫ್ಎಸ್ಎಲ್ ತಂಡದಿಂದ ತನಿಖೆ ನಡೆಸಿ ತಾಂತ್ರಿಕ ಸಲಕರಣೆಗಳನ್ನು ಬಳಸಿ ನನ್ನ ತೇಜೋವಧೆಗೆ ವಿಡಿಯೊ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆಯೂ ಕೇಳಿಕೊಳ್ಳುತ್ತೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
.ಭೋವಿ ನಿಗಮದ ಅಧ್ಯಕ್ಷರಿಂದ ಶೇ 60ರಷ್ಟು ಲಂಚಕ್ಕೆ ಬೇಡಿಕೆ: ವೆಂಕಟೇಶ್ ಮೌರ್ಯ ಆರೋಪ.
‘ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಭೂ ಒಡೆತನ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಂದ ಶೇ 60ರಷ್ಟು ಲಂಚ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ’ ಎಂದು ಭಾರತೀಯ ಭೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಮೌರ್ಯ ಆರೋಪಿಸಿದ್ದರು.

ರವಿಕುಮಾರ್ ಅವರು ಮಾತನಾಡಿರುವ ವಿಡಿಯೊ ಹಾಗೂ ಆಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
.AI ಬಳಸಿ ನನ್ನ ವಿರುದ್ಧ ಷಡ್ಯಂತ್ರ| CM ಸೂಚಿಸಿದರೆ ರಾಜೀನಾಮೆ ಕೊಡುವೆ: ರವಿಕುಮಾರ್.ಸಿಎಂ ಹೇಳಿದ್ದಾರೆ ಶೀಘ್ರ ರಾಜೀನಾಮೆ ಕೊಡುವೆ: ಎಸ್. ರವಿಕುಮಾರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.