ಬೆಂಗಳೂರು:‘ಬಿಡದಿ ಟೌನ್ಶಿಪ್ ಕುರಿತ ಚರ್ಚೆಗೆ ಡಿ.ಕೆ.ಶಿವಕುಮಾರ್ ಅವರು ಸವಾಲು ಹಾಕಿದ್ದರು. ನಾನು ಚರ್ಚೆಗೆ ಸಿದ್ಧನಿದ್ದೇನೆ’ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬಿಡದಿ ಚರ್ಚೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಸಿದ್ಧ ನಿದ್ದೇನೆ.ಅವರಿಗೆ ಬಿಡುವಿಲ್ಲ ರೇಟ್ ಫಿಕ್ಸ್, ವಸೂಲಿ ಫಿಕ್ಸ್ ಮಾಡುತ್ತಿದ್ದಾರೆ. ಬಿಡುವು ಮಾಡಿಕೊಂಡು ಚರ್ಚೆಗೆ ಬರಲಿ’ ಎಂದು ಹೇಳಿದರು.

ಇದಕ್ಕೂ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ನಾಯಕರ ಜತೆ ಕುಮಾರಸ್ವಾಮಿ ಸಭೆ ನಡೆಸಿದರು. ಜಿಬಿಎ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.

ಜಾಹ್ನವಿ ಜೆಡಿಎಸ್ ಸೇರ್ಪಡೆ: ಬಿಗ್ಬಾಸ್–12 ರಿಯಾಲಿಟಿ ಷೋ ಮಾಜಿ ಸ್ಪರ್ಧಿ, ಟಿ.ವಿ ನಿರೂಪಕಿ ಜಾಹ್ನವಿ ಅವರು ಭಾನುವಾರ ಜೆಡಿಎಸ್ ಪಕ್ಷಕ್ಕೆ ಸೇರಿದರು.

ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಧ್ವಜ ನೀಡಿ, ಜಾಹ್ನವಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಜೆಡಿಎಸ್ ಮಹಿಳಾ ಘಟಕವನ್ನು ಬಲಪಡಿಸುವ ಸಲುವಾಗಿ ಜಾಹ್ನವಿ ಅವರನ್ನು ಪಕ್ಷಕ್ಕೆ ಕರೆತರಲಾಗಿದೆ. ಜೆಡಿಎಸ್ನ ಸಿದ್ಧಾಂತಗಳ ಬಗ್ಗೆ ಒಲವಿರುವ ಕಾರಣಕ್ಕೆ ಜಾಹ್ನವಿ ಅವರೂ ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಘಟಕದ ಅಧ್ಯಕ್ಷ ರಮೇಶ್ಗೌಡ, ಮಹಿಳಾ ಘಟಕದ ಅಧ್ಯಕ್ಷ ರಶ್ಮಿ ರಾಮೇಗೌಡ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-51-228432395

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.