ಬೀದರ್: ‘ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಮೂರು ವರ್ಷ ಅವಧಿ ಮುಗಿಸಿ, ಸಾಧನಾ ಸಮಾವೇಶ ಮಾಡುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ’ ಎಂದು ಕೇಂದ್ರದ ಮಾಜಿಸಚಿವರೂ ಆದ ಬಿಜೆಪಿ ಮುಖಂಡ ಭಗವಂತ ಖೂಬಾ ಟೀಕಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಅಭಿವೃದ್ಧಿ ಇಲ್ಲದೆ, ಸರ್ಕಾರಿ ನೌಕರರಿಗೆ ಸಂಬಳ ನೀಡದೆ, ರೈತರ ಸಂಕಷ್ಟ ಅರಿಯದೆ, ಹಿಂದೆಂದೂ ಕಾಣದಷ್ಟು ರಾಜ್ಯವು ದಿವಾಳಿಯಾಗಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ರಾಜ್ಯವನ್ನು ದಿವಾಳಿ ಮಾಡಿರುವುದೇ ಈ ಸರ್ಕಾರದ ಸಾಧನೆಯಾಗಿದೆ. ಇವರು ಸಾಧನಾ ಸಮಾವೇಶದ ಬದಲು ದಿವಾಳಿ ಸಮಾವೇಶ ಮಾಡಬೇಕು ಎಂದು ಬುಧವಾರ ಹೊರಡಿಸಿರುವ ಪ್ರಕಟಣೆಯಲ್ಲಿ ಕುಟುಕಿದ್ದಾರೆ.

ರಾಜ್ಯದಲ್ಲಿ 2,809, ಬೀದರ್ ಜಿಲ್ಲೆಯಲ್ಲಿ 181 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೈತರ ಆತ್ಮಹತ್ಯೆಗಳು ಇವರ ಸರ್ಕಾರದ ಸಾಧನೆಯಾಗಿದೆ. ವಿದ್ಯುತ್ ದರ ಹೆಚ್ಚಳ, ಸ್ಟ್ಯಾಂಪ್ ಸುಂಕ ಹೆಚ್ಚಳ, ಎಲ್ಲಾ ವಸ್ತುಗಳ ಬೆಲೆ ಏರಿಕೆ ಮತ್ತು ಅನ್ನದಾತರ ಕಷ್ಟಗಳಿಗೆ ಸ್ಪಂದನೆ ಇಲ್ಲ. ಇಂಥ ಸರ್ಕಾರಕ್ಕೆ ಸಾಧನಾ ಸಮಾವೇಶ ಏಕೆ ಬೇಕು ಎಂದು ಪ್ರಶ್ನಿಸಿದ್ದಾರೆ.

ತನ್ನ ವೈಫಲ್ಯ ಮುಚ್ಚಿಕೊಳ್ಳಲು ಮೋದಿ ಸರ್ಕಾರದ ಮೇಲೆ ಬೊಟ್ಟು ಮಾಡೋದು ಬಿಡಬೇಕು. ಮೋದಿಯವರು ಏನೇ ಮಾಡಿದರೂ ಕೇವಲ ದೇಶದ ಹಿತ ಇರುತ್ತದೆ. ಅದನ್ನು ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರೂ ಮುಖ್ಯಮಂತ್ರಿ ಕುರ್ಚಿಗಾಗಿ ಜಗಳ ಆಡುತ್ತ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-33-1246248934

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.