ಬೀದರ್: ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಜೂನ್ 3ರಂದು ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಲು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಇದುವರೆಗೆ ಜಿಲ್ಲೆಯಿಂದ ಸಚಿವ ಸ್ಥಾನಕ್ಕೆ ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಈಶ್ವರ ಬಿ. ಖಂಡ್ರೆ ಅವರ ಹೆಸರೊಂದೇ ಕೇಳಿ ಬರುತ್ತಿತ್ತು. ಆದರೆ, ಈಗ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ್ ಅವರ ಹೆಸರು ಕೂಡ ಚಾಲ್ತಿಗೆ ಬಂದಿದೆ.

ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ರಾಜಶೇಖರ ಪಾಟೀಲ ಹುಮನಾಬಾದ್ ಅವರು ತಮ್ಮ ಸಹೋದರನಿಗೆ ಸಚಿವ ಸ್ಥಾನ ಕೊಡಿಸಲು ದಾಳ ಉರುಳಿಸಿದ್ದಾರೆ. ಮೊದಲಿನಿಂದಲೂ ರಾಜಶೇಖರ ಪಾಟೀಲ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ ಅವರೊಂದಿಗೆ ಉತ್ತಮ ಸಂಬಂಧ, ಸಂಪರ್ಕ ಹೊಂದಿದ್ದಾರೆ. ಈಗ ಅದನ್ನೇ ಬಳಸಿಕೊಂಡು ಸಹೋದರನಿಗೆ ಮಂತ್ರಿ ಸ್ಥಾನ ಕೊಡಿಸಲು ಕಸರತ್ತು ನಡೆಸುತ್ತಿದ್ದಾರೆ. ಇದಕ್ಕಾಗಿ ಅವರು ಬೆಂಗಳೂರಿನಲ್ಲಿ ತಳವೂರಿದ್ದು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು, ಕಲ್ಯಾಣ ಕರ್ನಾಟಕ ಭಾಗದಿಂದ ಪ್ರಿಯಾಂಕ್ ಖರ್ಗೆ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕೆಂಬ ಬೇಡಿಕೆ ಇರಿಸಿದ್ದಾರೆ.

ರಾಜ್ಯದಲ್ಲಿ 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ರಾಜಶೇಖರ ಪಾಟೀಲ ಹುಮನಾಬಾದ್ ಹಾಗೂ ಈಶ್ವರ ಬಿ. ಖಂಡ್ರೆ ನಡುವೆ ಅಷ್ಟಕಷ್ಟೇ ಎಂಬಂತಿದೆ. ಲೋಕಸಭಾ ಚುನಾವಣೆ ನಂತರ ಅಂತರ ತುಸು ಜಾಸ್ತಿಯೇ ಆಗಿದೆ. ಈಶ್ವರ ಖಂಡ್ರೆ ವಿರುದ್ಧದ ಅತೃಪ್ತರ ಬಣ ರಾಜಶೇಖರ ಪಾಟೀಲ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಹಲವು ಸಭೆಗಳನ್ನು ನಡೆಸಿ, ಪಕ್ಷದ ವರಿಷ್ಠರಿಗೆ ಅವರ ಕಾರ್ಯವೈಖರಿ ವಿರುದ್ಧ ದೂರು ಸಲ್ಲಿಸಿದ್ದರು. ಖಂಡ್ರೆ ಅವರನ್ನು ಹಣಿಯಲು ಒಂದು ಅವಕಾಶಕ್ಕಾಗಿ ಕಾಯುತ್ತಿದ್ದ ಪಾಟೀಲರಿಗೆ ಈಗ ಆ ಅವಕಾಶ ಒದಗಿ ಬಂದಿದ್ದು, ತಮಗಿರುವ ಸಂಪರ್ಕ ಹಾಗೂ ಜಿಲ್ಲೆಯ ಕೆಲ ಕಾಂಗ್ರೆಸ್ ಮುಖಂಡರ ಮೂಲಕ ಸಹೋದರನಿಗೆ ಸಚಿವ ಸ್ಥಾನ ಕೊಡಿಸಲು ಪಟ್ಟು ಹಾಕುತ್ತಿದ್ದಾರೆ. ಎರಡು ಸಲ ಎಂಎಲ್ಸಿ ಆಗಿರುವ ಚಂದ್ರಶೇಖರ ಪಾಟೀಲ ಅವರಿಗೆ ಮಂತ್ರಿಗಿರಿ ಕೊಡಬೇಕೆಂಬ ಕೂಗಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಸೇರಿದಂತೆ ಹಲವರು ದನಿಗೂಡಿಸಿದ್ದು, ಅದಕ್ಕೆ ಬಲ ಬಂದಿದೆ.

ಖಂಡ್ರೆ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಸ್ವಪಕ್ಷೀಯ ಅನೇಕ ಮುಖಂಡರನ್ನು ಕಡೆಗಣಿಸಿ, ಬಿಜೆಪಿಯ ಕೆಲ ಶಾಸಕರು, ಆ ಪಕ್ಷದ ಮುಖಂಡರಿಗೆ ಮಣೆ ಹಾಕಿದ್ದಾರೆ. ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಇನ್ನಿತರೆ ಕೆಲಸಗಳಲ್ಲಿ ಪಕ್ಷದ ಮುಖಂಡರಿಗಿಂತ ಬಿಜೆಪಿಯವರ ಮಾತಿಗೆ ಹೆಚ್ಚಿನ ಮಣೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಈಗ ಪಕ್ಷದ ವರಿಷ್ಠರಿಗೆ ಅದನ್ನು ಪುನಃ ನೆನಪಿಸುವ ಕೆಲಸ ಮಾಡುತ್ತಿದ್ದಾರೆ.

ಇನ್ನೊಂದಡೆ ಈಶ್ವರ ಖಂಡ್ರೆ ಕೂಡ ತಮ್ಮ ಪಟ್ಟು ಸಡಿಲಿಸಿಲ್ಲ. ಕಳೆದ ಕೆಲವು ದಿನಗಳಿಂದ ಖಂಡ್ರೆ ಅವರು ಬೆಂಗಳೂರಿನಲ್ಲಿಯೇ ತಳವೂರಿದ್ದು, ಸಚಿವ ಸ್ಥಾನಕ್ಕಾಗಿ ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಖಂಡ್ರೆ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಅವರಿಗೆ ಪ್ಲಸ್ ಪಾಯಿಂಟ್. ಈ ಹುದ್ದೆ ಬಳಸಿಕೊಂಡು ಅವರು ಇತ್ತೀಚೆಗೆ, ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರೊಂದಿಗೆ ಸಭೆ ನಡೆಸಿ, ಮಂತ್ರಿಗಿರಿಗೆ ತಮ್ಮ ಬೆಂಬಲಿಕ್ಕಿರಬೇಕೆಂದು ಮನವಿ ಮಾಡಿದ್ದಾರೆ. ಮತ್ತೊಂದೆಡೆ ಜಿಲ್ಲೆಯ ವಿವಿಧ ಮಠಾಧೀಶರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಸೇರಿದಂತೆ ಹಲವು ಮುಖಂಡರು, ಪಾಲಿಕೆ ಸದಸ್ಯರು ಬಹಿರಂಗವಾಗಿಯೇ ಖಂಡ್ರೆ ಪರವಾಗಿ ದನಿ ಎತ್ತಿದ್ದಾರೆ. ಕಾಂಗ್ರೆಸ್ ಪಕ್ಷ, ಖಂಡ್ರೆ ಅವರಿಗೆ ಡಿಸಿಎಂ ಹುದ್ದೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-33-346219579

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.