ಬೆಂಗಳೂರು: ಬೀದರ್ ಜಿಲ್ಲೆಯ ಭಾಲ್ಕಿಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಪಕ್ಷದ ನಾಯಕರು, ಕಾರ್ಯಕರ್ತರು ಇಂದು (ಮಂಗಳವಾರ) ಪ್ರತಿಭಟನೆ ನಡೆಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಸೇರಿ ಇತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸಿ.ಟಿ. ರವಿ, 'ಪ್ರಾಮಾಣಿಕ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ 'ಸೂಸೈಡ್ ಭಾಗ್ಯ' ಹಾಗೂ ರಾಜಕೀಯ ಎದುರಾಳಿಗಳಿಗೆ 'ಸುಪಾರಿ ಭಾಗ್ಯದ' 'ಗ್ಯಾರೆಂಟಿ' ನೀಡಿದ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ್ತು ಗುತ್ತಿಗೆದಾರ ಸಾವಿಗೆ ಕಾರಣೀಭೂತರಾದ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು' ಎಂದು ಹೇಳಿದ್ದಾರೆ.
.ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಪ್ರಿಯಾಂಕ್ ಪರ–ವಿರೋಧ ವಾಗ್ವಾದ.ಸಚಿನ್ ಪಾಂಚಾಳ್ ಆತ್ಮಹತ್ಯೆ ಕೇಸ್ CIDಗೆ ಕೊಡಲು ಪ್ರಿಯಾಂಕ್ ಖರ್ಗೆ CM ಬಳಿ ಮನವಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.