ಬೀದರ್: ‘ಬೀದರ್ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಭಾರಿ ಪ್ರಮಾಣದ ಬೆಳೆ, ಮನೆ ಹಾಗೂ ಮೂಲಸೌಕರ್ಯಕ್ಕೆ ಹಾನಿ ಉಂಟಾಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ಘೋಷಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ.

ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ಬೆಂಗಳೂರಿನಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಈಶ್ವರ ಖಂಡ್ರೆ, ತಮ್ಮ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸೆ. 30ರಂದು ವೈಮಾನಿಕ ಸಮೀಕ್ಷೆ ನಡೆಸುವ ಭರವಸೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮವಾಗಿ ಋತುಮಾನಗಳಲ್ಲಿ ಏರುಪೇರಾಗುತ್ತಿದೆ. ಇದರ ಪರಿಣಾಮ ಗಡಿ ಜಿಲ್ಲೆ ಬೀದರ್ ಮೇಲೂ ಆಗುತ್ತಿದೆ. ಹೆಚ್ಚಿನ ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಇಲ್ಲದ ನಮ್ಮ ಜಿಲ್ಲೆಯ ಶೇ 75ರಷ್ಟು ಜನರ ಬದುಕು ಕೃಷಿಯನ್ನೇ ಅವಲಂಬಿಸಿದೆ. ಈ ವರ್ಷ 4.31 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದೆ. ಆದರೆ, ಆಗಸ್ಟ್ ತಿಂಗಳಲ್ಲೇ ಸುರಿದ ಅನಿರೀಕ್ಷಿತ ಪ್ರಮಾಣದ ಮಳೆಯಿಂದ ಶೇ 25ರಷ್ಟು ಬೆಳೆ ನಷ್ಟವಾಗಿತ್ತು. ಈಗ ಸೆಪ್ಟೆಂಬರ್ ನಲ್ಲಿ ಮತ್ತೆ ವಿಪರೀತ ಮಳೆ ಸುರಿಯುತ್ತಿದ್ದು, ರಾಶಿಗೆ ಬಂದ ಹೆಸರು, ಉದ್ದು, ತೊಗರಿ, ಸೋಯಾ ಸೇರಿದಂತೆ ಎಲ್ಲ ಬೆಳೆ ಸಂಪೂರ್ಣ ಹಾನಿಯಾಗಿದೆ. ಇದರಿಂದ ನಮ್ಮ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮುಖ್ಯಮಂತ್ರಿಯವರಿಗೆ ಈಶ್ವರ ಖಂಡ್ರೆ ವಿವರಿಸಿದ್ದಾರೆ.

ಒಂದು ವಾರದ ಅವಧಿಯಲ್ಲಿ ಒಂದು ತಿಂಗಳ ಮಳೆ ಬೀಳುತ್ತಿರುವ ಪರಿಣಾಮ ಹಲವು ಸೇತುವೆಗಳು ಕುಸಿದು ಸಂಪರ್ಕ ಕಡಿತವಾಗಿದೆ. ವಿದ್ಯುತ್ ಕಂಬಗಳು ಧರೆಗುರುಳಿ ಅನೇಕ ಗ್ರಾಮಗಳು ವಿದ್ಯುತ್ ಇಲ್ಲದೆ ಅಂಧಕಾರದಲ್ಲಿ ಮುಳುಗಿವೆ. ಭಾರಿ ಮಳೆಗೆ ಶಾಲಾ ಕೊಠಡಿ, ಅಂಗನವಾಡಿ ಕಟ್ಟಡ, ಆಸ್ಪತ್ರೆ, ಸರ್ಕಾರಿ ಕಚೇರಿಗಳೂ ಸೋರುವಂತಾಗಿದೆ. ಪ್ರವಾಹದಿಂದಾಗಿ ಫಲವತ್ತಾದ ಮಣ್ಣು ಕೊಚ್ಚಿ ಹೋಗಿದೆ. ಭೂಮಿ ಸವಳು ಜವಳಾಗಿದೆ. ರೈತರ ಬಗ್ಗೆ ಅಪಾರ ಕಾಳಜಿ ಹೊಂದಿರುವ ತಾವು, ಬೀದರ್ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ತುರ್ತು ಪರಿಹಾರ ಹಾಗೂ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ವಿನಂತಿ ಮಾಡಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.