ಬೀದರ್: ಕಾರಂಜಾ ನೀರಾವರಿ ಯೋಜನೆಯಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಇದೇ ವೇಳೆ ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರವಾಗಿ ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆ ಖಂಡಿಸಿ ಘೋಷಣೆ ಕೂಗಿದರು.

ಸಮಿತಿ ಮುಖಂಡ ಲಕ್ಷ್ಮಣ ದಸ್ತಿ ಮಾತನಾಡಿ, ‘ವಿಧಾನ ಪರಿಷತ್ತಿನಲ್ಲಿ ಕಾರಂಜಾ ಸಂತ್ರಸ್ತರ ಪ್ರಶ್ನೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅನುಪಸ್ಥಿತಿಯಲ್ಲಿ ಅವರ ಪರವಾಗಿ ಉತ್ತರ ನೀಡಿದ ಶಿವರಾಜ್ ತಂಗಡಗಿ ಅವರು ಬೀದರ್ ಜಿಲ್ಲೆಯ ಜನತೆಗೆ ಅವಮಾನಕಾರಿಯಾಗುವ ರೀತಿಯಲ್ಲಿ ಬೇಜವಾಬ್ದಾರಿತನದಿಂದ ಮಾತನಾಡಿದ್ದಾರೆ. ಇದು ಖಂಡನೀಯ’ ಎಂದರು.

‘ವಿಧಾನ ಪರಿಷತ್ ಸದಸ್ಯ ಎಂ.ಜಿ. ಮುಳೆ ಅವರು ಸದನದಲ್ಲಿ ಕಾರಂಜಾ ಸಂತ್ರಸ್ತರಿಗೆ ಮಾನವೀಯತೆ ಹಾಗೂ ವೈಜ್ಞಾನಿಕ ಆಧಾರದ ಮೇಲೆ ಪರಿಹಾರ ನೀಡಬೇಕೆಂದು ಪ್ರಶ್ನೆ ಕೇಳಿ ಆಗ್ರಹಿಸಿದ್ದರು. ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದೆ. ಸರ್ಕಾರಕ್ಕೂ ಈ ವಿಷಯ ಮನದಟ್ಟಾಗಿದೆ. ನ್ಯಾಯಾಲಯದ ತೀರ್ಪುಗಳನ್ನು ಮಾನದಂಡವಾಗಿ ಇರಿಸಿಕೊಂಡು ವೈಜ್ಞಾನಿಕ ಹಾಗೂ ಮಾನವೀಯತೆ ಆಧಾರದ ಮೇಲೆ ಪರಿಹಾರ ನೀಡಬೇಕು. ಹೇಮಾವತಿ ಯೋಜನೆ ಸಂತ್ರಸ್ತರಿಗೆ ನೀಡಿದಂತೆ ಕಾರಂಜಾ ಸಂತ್ರಸ್ತರಿಗೂ ಪರಿಹಾರ ಜೊತೆಗೆ ಬದುಕಲು ಜಮೀನು ಒದಗಿಸಬೇಕು’ ಎಂದು ಆಗ್ರಹಿಸಿದರು.

ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹುಚಕನಳ್ಳಿ ಮಾತನಾಡಿ, ‘ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಈ ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸಿ ಹಲವಾರು ಸಭೆಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಸಹ ಈ ಕುರಿತು ಸಭೆ ನಡೆಸಿ ಭರವಸೆ ನೀಡಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರು ಪಕ್ಷಾತೀತವಾಗಿ ಒಗ್ಗೂಡಿ ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ವಿನಯ್ ಕುಮಾರ್ ಮಾಳಗೆ, ಮಹೇಶ್ ಗೋರನಾಳಕರ್, ರಾಜಪ್ಪ ಕೋಸಂ, ರಾಜಪ್ಪ ಬುಸ್ಸಾ, ವೀರೇಂದ್ರ ಭತಮುರ್ಗೆ, ರೇವಣಪ್ಪ ಕಾಂಜೋಳ, ಸಂಗಾರೆಡ್ಡಿ ಅವರಾದ, ಹರ್ಷವರ್ಧನ್ ರಾಠೋಡ್, ಶ್ರೀಧರ್ ಸೋಮನೋರ್, ಮಾರಪ್ಪ ಕೌದೆ, ಯುಸೂಫ್ ರೇಕುಳಗಿ, ಮುಹಮ್ಮದ್ ಸೋಲಾಪೂರೆ, ಲಕ್ಷ್ಮೀ ಕೌದೆ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-33-1204856584

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.