ಬೆಂಗಳೂರು: ‘ಬಿಹಾರ ಚುನಾವಣೆಗೆ ಹಣ ಕಳುಹಿಸಲು ಮಂತ್ರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾರ್ಗೆಟ್ ನೀಡಿದ್ದು, ಸೂಟ್ಕೇಸ್ ತುಂಬಿಸುವ ಕೆಲಸ ನಡೆದಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ‘ಎಕ್ಸ್’ನಲ್ಲಿ ಆರೋಪಿಸಿದ್ದಾರೆ.

‘ಕಾಂಗ್ರೆಸ್ ಸರ್ಕಾರದಲ್ಲಿರುವ ಯಾರಿಗೂ ಜನರ ಹಿತ, ನಾಡಿನ ಅಭಿವೃದ್ಧಿ ಬೇಕಾಗಿಲ್ಲ. ಮೋಜು, ಪಾರ್ಟಿ, ಔತಣಕೂಟಗಳನ್ನು ಏರ್ಪಡಿಸುವ ಮೂಲಕ ಅಧಿಕಾರಕ್ಕೆ ಕಿತ್ತಾಟ ಹಾಗೂ ಶೀತಲ ಸಮರ ನಿತ್ಯವು ನಡೆಯುತ್ತಿದೆ’ ಎಂದು ಹೇಳಿದ್ದಾರೆ.

‘ಕೊಲೆ, ಸುಲಿಗೆ, ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳು ನಿತ್ಯವೂ ವರದಿಯಾಗುತ್ತಿವೆ. ಅತಿವೃಷ್ಟಿಯಿಂದ ಕಂಗೆಟ್ಟು ಹೋಗಿರುವ ಕಲ್ಯಾಣ ಕರ್ನಾಟಕದ ರೈತರ ಗೋಳು ಹೇಳತೀರದಾಗಿದೆ. ಬೆಂಗಳೂರಿನಲ್ಲಿ ಹಳ್ಳ ಬಿದ್ದ ರಸ್ತೆಗಳಿಂದ ನಿತ್ಯವೂ ಸಾವು– ನೋವುಗಳು ಸಂಭವಿಸುತ್ತಿವೆ. ಆದರೆ, ಮುಖ್ಯಮಂತ್ರಿಯವರು ಇದನ್ನು ಸಂಪೂರ್ಣವಾಗಿ ಮರೆತು ಸಹೋದ್ಯೋಗಿಗಳಿಗೆ ಔತಣ ಕೊಡಿಸುವುದರಲ್ಲಿ ಮಗ್ನರಾಗಿದ್ದಾರೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.