ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಆ ರಾಜ್ಯದ ಮತದಾರರಾದವರಿಗೆ ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡುವಂತೆ ಉದ್ದಿಮೆದಾರರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಎಲ್ಲ ಕಂಪನಿಗಳು, ವಾಣಿಜ್ಯ ಉದ್ಯಮಿಗಳು, ಹೋಟೆಲ್ಗಳು, ಗುತ್ತಿಗೆದಾರರು, ಬಿಲ್ಡರ್ಗಳು, ಅಂಗಡಿ ಮುಂಗಟ್ಟುಗಳ ಮಾಲೀಕರು, ಹಾಗೂ ಇತರೆ ಉದ್ದಮೆದಾರಿಗೆ ಅವರು ಈ ಕುರಿತು ಪತ್ರ ಬರೆದಿದ್ದಾರೆ.

‘ಬಿಹಾರದಲ್ಲಿ ಎರಡು ಹಂತದಲ್ಲಿ ಅಂದರೆ, ಇದೇ 6 ಮತ್ತು 11ರಂದು ಮತದಾನ ನಡೆಯಲಿದೆ. ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಬಿಹಾರದ ನಿವಾಸಿಗಳು ಸಾಕಷ್ಟು ಸಂಖ್ಯೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ರಜೆ ನೀಡುವ ಮೂಲಕ ಈ ನಿವಾಸಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಹಕರಿಸಬೇಕು’ ಎಂದೂ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.