ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ ಟ್ಯಾಕ್ಸಿ ಚಾಲಕರಿಗೆ ಅಡ್ಡಿ ಸಲ್ಲ: ಹೈಕೋರ್ಟ್‌

Published 26 ಏಪ್ರಿಲ್ 2024, 0:24 IST
Last Updated 26 ಏಪ್ರಿಲ್ 2024, 0:24 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಂಗಳೂರು ಮಹಾನಗರವೂ ಸೇರಿದಂತೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಚಾಲಕರಿಗೆ ಯಾವುದೇ ರೀತಿಯಲ್ಲಿ ಅಡ್ಡಿಪಡಿಸದಂತೆ ಕ್ರಮ ಕೈಗೊಳ್ಳಬೇಕು’ ಎಂದು ಹೈಕೋರ್ಟ್ ಗೃಹ ಇಲಾಖೆಗೆ ನಿರ್ದೇಶಿಸಿದೆ.

ಮಡಿವಾಳದ ’ಬೈಕ್ ಟ್ಯಾಕ್ಸಿ ಚಾಲಕರ ಕಲ್ಯಾಣ ಸಂಘ’ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಕೆ.ಎನ್‌.ಫಣೀಂದ್ರ, ‘ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಹಲ್ಲೆ ಮತ್ತು ಅವರ ಸೇವೆಗೆ ತಡೆಯೊಡ್ಡುವುದು ಮುಂದುವರಿದಿದೆ. ಈ ಕುರಿತು ಸಂಬಂಧಿಸಿದವರಿಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಹಾಗಾಗಿ, ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅಡ್ಡಿ ಉಂಟು ಮಾಡುವವರ ವಿರುದ್ಧ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಯಾರಾದರೂ ಕಾನೂನು ಬಾಹಿರವಾಗಿ ತಡೆಯೊಡ್ಡಲು ಯತ್ನಿಸಿದರೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ನಿರ್ದೇಶಿಸಿ ಅರ್ಜಿ ವಿಲೇವಾರಿ ಮಾಡಿದೆ. ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್‌ ಶೆಟ್ಟಿ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT