ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ನಿಗದಿತ ಅವಧಿಯೊಳಗೆ ದೋಷಾರೋಪ ಪಟ್ಟಿ ಸಲ್ಲಿಸದೇ ಹೋದ ಕಾರಣ ನಾಲ್ವರು ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಡಿಫಾಲ್ಟ್ ಜಾಮೀನು ಮಂಜೂರು ಮಾಡಿದೆ.

ಈ ಸಂಬಂದ ಡಿಫಾಲ್ಟ್ ಜಾಮೀನು (ನಿಗದಿತ ಅವಧಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸದೇ ಹೋದಾಗ ಸಂವಿಧಾನ ಕೊಡಮಾಡಿದ ಅವಕಾಶಗಳಿಗೆ ಅನುಗುಣವಾಗಿ ಮತ್ತು ಕಾನೂನಿನ ಅವಿಭಾಜ್ಯ ಅಧಿಕಾರ ಚಲಾಯಿಸಿ ನೀಡಲಾಗುವ ಜಾಮೀನು) ಕೋರಿ ಆರೋಪಿಗಳಾದ ಪಿ.ಜಗದೀಶ್ (53), ಕೆ.ಕಿರಣ್ (34), ಬಿ.ವಿಮಲ್ ರಾಜ್ (31) ಮತ್ತು ಆರ್.ಮದನ್ (28) ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ಆರೋಪಿಗಳು ತಲಾ ₹1 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆ ಒದಗಿಸಬೇಕು. ತನಿಖೆಗೆ ಸಹಕರಿಸಬೇಕು’ ಎಂಬುದೂ ಸೇರಿದಂತೆ ಸಾಂಪ್ರದಾಯಿಕ ಷರತ್ತುಗಳ ಜೊತೆಗೆ, ಕೋಕಾ ಮೇಲ್ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡುವ ಅಂತಿಮ ತೀರ್ಮಾನ ಈ ಜಾಮೀನು ಮಂಜೂರಾತಿ ಆದೇಶಕ್ಕೆ ಒಳಪಟ್ಟಿರುತ್ತದೆ ಎಂಬ ಷರತ್ತನ್ನೂ ನ್ಯಾಯಪೀಠ ವಿಧಿಸಿದೆ.

ಆರೋಪಿಗಳ ವಿರುದ್ಧ ರಾಜ್ಯ ಸರ್ಕಾರ ಕೋಕಾ ಕಾಯ್ದೆ ಅನ್ವಯ ಮಾಡಿದ್ದ ಆದೇಶವನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಪ್ರಕರಣದ ಐದನೇ ಆರೋಪಿಯೂ ಆದ ಬಿಜೆಪಿಯ ಶಾಸಕ ಬೈರತಿ ಬಸವರಾಜ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಮಾ.12ರಂದು ನಿಯಮಿತ (ರೆಗ್ಯುಲರ್) ಜಾಮೀನು ಮಂಜೂರು ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.