ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೊಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.
ಪ್ರತಿ ಜಿಲ್ಲೆಯ ಒಂದೊಂದು ಶಾಲೆಯಲ್ಲಿ ಪ್ರಾಯೋಗಿಕವಾಗಿ ಬಯೊಮೆಟ್ರಿಕ್ ಅಳವಡಿಸಿ, ಹಾಜರಾತಿ ಪಡೆಯಲಾಗಿತ್ತು. ಯಾವುದೇ ತಾಂತ್ರಿಕ ದೋಷಗಳಿಲ್ಲದೆ ಪ್ರಯೋಗ ಯಶಸ್ವಿಯಾಗಿತ್ತು. ಹಾಗಾಗಿ, ರಾಜ್ಯದ ಎಲ್ಲ ಶಾಲೆಗಳಲ್ಲೂ ಬಯೊಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವ ಕುರಿತು ಇಲಾಖೆ ಯೋಜನಾ ವರದಿ ಸಿದ್ಧಪಡಿಸಿದೆ.