ನವದೆಹಲಿ: ಬೃಂದಾವನ ಫೌಂಡೇಷನ್ ಕಲಬುರಗಿಯ ಅಫಜಲಪುರ ರಸ್ತೆಯ ಶರಣ ಸಿರಸಗಿ ಗ್ರಾಮದ ಸರ್ವೆ ಸಂಖ್ಯೆ 13ರಲ್ಲಿ ನಿರ್ಮಿಸಿರುವ ಜೈವಿಕ ತ್ಯಾಜ್ಯ ನಿರ್ವಹಣಾ ಘಟಕ ಮುಚ್ಚಲು ಆದೇಶಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್ಜಿಟಿ) ಮಾಲಿನ್ಯ ನಿಯಂತ್ರಣ ಮಂಡಳಿ ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಿದೆ.

ಕೇಂದ್ರ ಕಚೇರಿಯ ಸೂಚನೆಯ ಮೇರೆಗೆ ಘಟಕದ ಪರಿವೀಕ್ಷಣೆ ಮಾಡಲಾಗಿದೆ. ಮುಚ್ಚಲು ಆದೇಶಿಸಿದ ಬಳಿಕವೂ ಸಂಸ್ಥೆಯವರು ಕೆಲವೊಂದು ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಪೂರ್ವಾನುಮತಿ ಪಡೆಯದೇ ಈ ಘಟಕ ಪ್ರವೇಶಿಸಬಾರದು ಹಾಗೂ ಯಾವುದೇ ಚಟುವಟಿಕೆ ನಡೆಸಬಾರದು ಎಂದು ನಿರ್ದೇಶನ ನೀಡಲಾಗಿದೆ. ತಪ್ಪಿದಲ್ಲಿ ಕಾಯ್ದೆ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲು ಕೇಂದ್ರ ಕಚೇರಿಗೆ ಶಿಫಾರಸು ಮಾಡಲಾಗುವುದು ಎಂದು ವಲಯದ ಪರಿಸರ ಅಧಿಕಾರಿ ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.