ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹32 ಕೋಟಿ ಮೌಲ್ಯದ ಬಿಟ್ ಕಾಯಿನ್‌ಗಳ ಕಳ್ಳತನ: ಹ್ಯಾಕರ್ ಶ್ರೀಕಿ ಮತ್ತೆ ಬಂಧನ

ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು ಬಂಧಿಸಿದ್ದಾರೆ.
Published 7 ಮೇ 2024, 10:02 IST
Last Updated 7 ಮೇ 2024, 10:02 IST
ಅಕ್ಷರ ಗಾತ್ರ

ಬೆಂಗಳೂರು: 60.6 ಬಿಟ್‌ ಕಾಯಿನ್ (ಸದ್ಯದ ಮಾರುಕಟ್ಟೆ ಮೌಲ್ಯ ₹ 32.48 ಕೋಟಿ) ಕಳ್ಳತನ ಪ್ರಕರಣ ಸಂಬಂಧ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು ಬಂಧಿಸಿದ್ದಾರೆ.

‘ಜಯನಗರದ ಶ್ರೀಕೃಷ್ಣ, ಅಂತರರಾಷ್ಟ್ರೀಯ ಹ್ಯಾಕರ್ ಆಗಿ ಗುರುತಿಸಿಕೊಂಡಿದ್ದಾನೆ. 2017ರಂದು ತುಮಕೂರಿನ ಉನೊ ಕಾಯಿನ್ ಕಂ‍ಪನಿಯ ಸರ್ವರ್‌ನಲ್ಲಿದ್ದ 60.6 ಬಿಟ್ ಕಾಯಿನ್‌ಗಳು ಕಳ್ಳತನ ಆಗಿದ್ದವು. ಈ ಪ್ರಕರಣದಲ್ಲಿ ಶ್ರೀಕಿ ಪಾತ್ರವಿರುವ ಮಾಹಿತಿ ಇತ್ತು. ವಿಚಾರಣೆಗೆ ಹಾಜರಾಗುವಂತೆ ಶ್ರೀಕಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಆತ ಗೈರಾಗಿದ್ದ. ಇದೇ ಕಾರಣಕ್ಕೆ ಆತನನ್ನು ಬಂಧಿಸಲಾಗಿದೆ’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ಬಿಟ್‌ ಕಾಯಿನ್ ಕಳ್ಳತನಕ್ಕೆ ಸಂಬಂಧಪಟ್ಟಂತೆ ಕಂಪನಿಯ ಸಹ‌ ಸಂಸ್ಥಾಪಕ ಬಿ.ವಿ.ಹರೀಶ್ ಅವರು ತುಮಕೂರಿನ ಸೆನ್ (ಸೈಬರ್ ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT