ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುವ ಗುರಿ: ಬಿ.ವೈ. ವಿಜಯೇಂದ್ರ

Published 24 ಡಿಸೆಂಬರ್ 2023, 7:41 IST
Last Updated 24 ಡಿಸೆಂಬರ್ 2023, 7:41 IST
ಅಕ್ಷರ ಗಾತ್ರ

ದಾವಣಗೆರೆ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಗುರಿ ಇದ್ದು, ತಂದೆಯಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಸುತ್ತುತ್ತೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ,ವೈ,ವಿಜಯೇಂದ್ರ ಹೇಳಿದರು.

ರಾಜ್ಯ ಘಟಕ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಆಗಮಿಸಿದ ಅವರನ್ನು ಕಾರ್ಯಕರ್ತರು ಸ್ವಾಗತವನ್ನು ಸ್ವೀಕರಿಸಿ ಮಾತನಾಡಿ, 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸುವುದು ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದರು.
6 ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್, ರೈತ, ಬಡವರ ವಿರೋಧಿ ಪಕ್ಷ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು. ಈ ನಿಟ್ಟಿನಲ್ಲಿ ದೇಶದ ಗಡಿ ಕಾಯುವ ಸೈನಿಕನಂತೆ ಬಿಜೆಪಯ ಕಾರ್ಯಕರ್ತರು ಮನೆ ಸೇರಿಕೊಳ್ಳದೇ ಬಿಜೆಪಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ತಂದೆಯಂತೆ ಕೆಲಸ ಮಾಡಿ ಮುಂದಿನ ದಿನಗಳಲ್ಲಿ ಬಿಜೆಪಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಅಲ್ಲಿಯವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದರು. ಜಿಲ್ಲಾ ಪ್ರವಾಸದ ವೇಳೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ. ಲಕ್ಷಾಂತರ ಜನರನ್ನು ಸೇರಿಸಿ ಸಮಾವೇಶ ಮಾಡೋಣ ಎಂದು ಹೇಳಿದರು,

ಅದ್ದೂರಿ ಸ್ವಾಗತ

ಬಿ,ವಿ,ವಿಜಯೇಂದ್ರ ಆಗಮಿಸುತ್ತಿದ್ದಂತೆಯೇ ಇಲ್ಲಿನ ಬಾಪೂಜಿ ಸಮುದಾಯ ಭವನದ ಎದುರು ಪಟಾಕಿ ಸಿಡಿಸಿ 60 ಅಡಿ ಉದ್ದದ ಬೃಹತ್ ಹೂವಿನ ಹಾರವನ್ನು ಕ್ರೇನ್ ಮೂಲಕ ಹಾಕಿ ಅದ್ದೂರಿಯಾಗಿ ಸ್ವಾಗತಿಸಿದರು.

ಬಿಜೆಪಿ ಮುಖಂಡ ಬಿ.ಟಿ.ಸಿದ್ದಪ್ಪ ಹಾಗೂ ಪುತ್ರ ಶ್ಯಾಮ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮುಖಂಡರಾದ ಪಿ.ಸಿ,ಶ್ರೀನಿವಾಸ್ ಇತರರು ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT