ಬೆಂಗಳೂರು: ಆದಾಯ ಸಂಗ್ರಹದಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ಸಾಲದ ಎತ್ತುವಳಿಗೆ ಇಳಿದಿದೆ. ಆ ಮೂಲಕ ಜನರನ್ನೂ ಸಾಲದ ಸುಳಿಗೆ ಸಿಲುಕಿಸುತ್ತಿದೆ ಎಂದು ಬಿಜೆಪಿಯ ಕೆ.ಎಸ್.ನವೀನ್ ದೂರಿದರು.

ವಿಧಾನಪರಿಷತ್ನಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ಕಳೆದ ಸಾಲಿನಲ್ಲಿ ನಿರೀಕ್ಷಿತ ಆದಾಯಕ್ಕಿಂತ ಕಡಿಮೆ ಸಂಗ್ರಹವಾಗಿದೆ. ಇದು 2026–27ನೇ ಸಾಲಿನ ಬಜೆಟ್ ಮೇಲೂ ಪರಿಣಾಮ ಬೀರಿದೆ. ಸಾಲದ ಭಾರ, ಅಸಲು–ಬಡ್ಡಿ ಪಾವತಿ ಅಧಿಕವಾಗಿದೆ. ವಿತ್ತೀಯ ಕೊರತೆ ಹೆಚ್ಚಾಗಿದೆ. ಜನರು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕರ್ನಾಟಕ ಮತ್ತೊಂದು ಶ್ರೀಲಂಕಾ ಆಗಲಿದೆ ಎಂದರು.

ಒಳಮೀಸಲಾತಿ ಗೊಂದಲದ ಕಾರಣಕ್ಕಾಗಿ ನೇಮಕಾತಿಗಳು ನನೆಗುದಿಗೆ ಬಿದ್ದಿದ್ದವು. ಯುವಕರು ಬೀದಿಗಿಳಿದು ಹೋರಾಟ ಮಾಡುವ ಸ್ಥಿತಿ ಎದುರಾಗಿದೆ. ಧಾರವಾಡದಲ್ಲಿ ನಿರುದ್ಯೋಗಿಗಳು ನಡೆಸಿದ ಹೋರಾಟದ ನಂತರ 56,432 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ಸರ್ಕಾರ ಹೇಳಿದೆ. ಆದರೆ, ನೇಮಕಾತಿಗೆ ಅಗತ್ಯವಾದ ಅನುದಾನವನ್ನು ಬಜೆಟ್ನಲ್ಲಿ ಮೀಸಲಿಟ್ಟಿಲ್ಲ. ಯುವಕರ ಭವಿಷ್ಯದ ಬಗ್ಗೆ ನಿಜವಾದ ಬದ್ಧತೆ ಇಲ್ಲ. ಹಲವು ಇಲಾಖೆಗಳ ಸಿಬ್ಬಂದಿಗೆ ಸರಿಯಾಗಿ ವೇತನವೇ ಸಿಗುತ್ತಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ನ ಐವನ್ ಡಿಸೋಜ ಮಾತನಾಡಿ, ಜನ ಸಾಮಾನ್ಯರಿಗೆ ನೆರವಾಗುವ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಜತೆಗೆ ಹತ್ತುಹಲವು ಅಭಿವೃದ್ಧಿ ಯೋಜನೆಗಳಿಗೂ ಅನುದಾನ ಹಂಚಿಕೆ ಮಾಡಲಾಗಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ಅಗತ್ಯ ಅನುದಾನ ಹಂಚಿಕೆ ಮಾಡಲಾಗಿದೆ. ಮಹಿಳೆಯರು, ಮಕ್ಕಳು, ಕಾರ್ಮಿಕರು, ಪರಿಶಿಷ್ಟರು, ಅಲ್ಪ ಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೂ ಆದ್ಯತೆ ನೀಡಲಾಗಿದೆ ಎಂದು ಶ್ಲಾಘಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.