ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಧಾನ ಪರಿಷತ್ ಚುನಾವಣೆ: ಸಿ.ಟಿ ರವಿ ಸೇರಿ ಮೂವರ ಹೆಸರು ಘೋಷಿಸಿದ ಬಿಜೆಪಿ

Published 2 ಜೂನ್ 2024, 6:44 IST
Last Updated 2 ಜೂನ್ 2024, 6:44 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂವರು ಅಭ್ಯರ್ಥಿಗಳನ್ನು ಅಖೈರುಗೊಳಿಸಿದೆ.

ಸಿ.ಟಿ. ರವಿ., ಎನ್. ರವಿಕುಮಾರ್ ಮತ್ತು ಎಂ.ಜಿ ಮುಳೆ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.

ಧನ್ಯವಾದ ಸಲ್ಲಿಸಿದ ಸಿ.ಟಿ ರವಿ...

'ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಕೋರ್ ಕಮಿಟಿಯ ಎಲ್ಲಾ ನನ್ನ ಸಹೋದ್ಯೋಗಿ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು' ಎಂದು ಸಿ.ಟಿ. ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT