ಬೆಂಗಳೂರು: ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ ಎಂದು ಬಿಜೆಪಿ ಕಾಂಗ್ರೆಸ್ ಅನ್ನು ಪ್ರಶ್ನೆ ಮಾಡಿದೆ.

ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, 'ಸಂಪತ್ ರಾಜ್ ಬಂಧನವಾದ ನಂತರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ತಮ್ಮ ಪರವಾಗಿ ನಿಲ್ಲುವಂತೆ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಏನಾಗುತ್ತಿದೆ ಕಾಂಗ್ರೆಸ್? ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ?' ಎಂದು ಅದು ಪ್ರಶ್ನಿಸಿದೆ.

ಅಲ್ಲದೆ, ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪರಮೇಶ್ವರ್ ಅವರ ಸೋಲಿನ ಹಿಂದೆ ಕಾಂಗ್ರೆಸ್‌ನ ದಲಿತ ವಿರೋಧಿ ನೀತಿ ಇದೆ ಎಂದೂ ಬಿಜೆಪಿ ಆರೋಪಿಸಿದೆ.

'ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಕಾಲದಿಂದಲೇ ಕಾಂಗ್ರೆಸ್ ದಲಿತರ ವಿರೋಧಿ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ. ರಾಜ್ಯದಲ್ಲೂ ಅದರ ಮುಂದುವರೆದ ಭಾಗಗಳನ್ನು ಸಿದ್ದರಾಮಯ್ಯ ಮಾಡಿ ತೋರಿಸಿದ್ದಾರೆ. ಹಿರಿಯ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪರಮೇಶ್ವರ್ ಅವರ ಸೋಲುಗಳ ಹಿಂದೆ ಕಾಂಗ್ರೆಸ್ಸಿನ ದಲಿತ ವಿರೋಧಿ ನೀತಿಯಿದೆ,' ಎಂದು ಅದು ಹೇಳಿದೆ.

ತನ್ನ ಟ್ವೀಟ್‌ನಲ್ಲಿ ಬಿಜೆಪಿಯು #CONgressAgainstDalits (ಕಾಂಗ್ರೆಸ್ ದಲಿತ ವಿರೋಧಿ) ಎಂಬ ಹ್ಯಾಷ್‌ಟ್ಯಾಗ್ ಬಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.