ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಪರಿಷತ್‌ನಲ್ಲೂ ಗದ್ದಲ, ಕಲಾಪ ಮುಂದೂಡಿಕೆ

Published 28 ಫೆಬ್ರುವರಿ 2024, 6:01 IST
Last Updated 28 ಫೆಬ್ರುವರಿ 2024, 6:01 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿಧಾನಪರಿಷತ್‌ನಲ್ಲಿ ಬಿಜೆಪಿ ಗದ್ದಲ ನಡೆಸಿದ್ದರಿಂದಾಗಿ ಕಲಾಪ ನಡೆಯಲಿಲ್ಲ.

10 ಗಂಟೆಗೆ ಕಲಾಪ ಆರಂಭವಾದ ಕೂಡಲೇ ಪ್ರಕರಣ ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು ಮುಖ್ಯಮಂತ್ರಿ , ಗೃಹಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ತನಿಖೆ ನಡೆಯುತ್ತಿದೆ. ಅದು ಮುಗಿದ ಬಳಿಕ ಕ್ರಮ ಜರುಗಿಸುತ್ತೇವೆ. ಕಲಾಪ ನಡೆಯಲು ಅವಕಾಶ ಕೊಡಿ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಕೋರಿದರು.

ಬಿಜೆಪಿ ಸದಸ್ಯರು ಅದನ್ನು ಒಪ್ಪಲಿಲ್ಲ. ಆಡಳಿತ ಸದಸ್ಯರು–ವಿರೋಧ ಪಕ್ಷದ ಸದಸ್ಯರ ವಾಗ್ವಾದ ಜೋರಾಯಿತು. ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಕೆಲ ಹೊತ್ತು ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT