ಕಲಬುರ್ಗಿ: ‘ಗುಲಬರ್ಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮಮತಕ್ಷೇತ್ರವನ್ನು ಬಿಟ್ಟು ಅಲ್ಲಾಡುತ್ತಿಲ್ಲ. ಈ ರೀತಿಯ ಅನುಭವ ಇಡೀ ದೇಶದಲ್ಲಿ ನಮಗೆ ಎಲ್ಲೂ ಆಗಿಲ್ಲ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಪಿ. ಮುರಳೀಧರರಾವ್ ಹೇಳಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನರೇಂದ್ರ ಮೋದಿ, ಅಮಿತ್ ಶಾ ಅವರು ದೇಶದಾದ್ಯಂತ ಚುನಾವಣಾ ಪ್ರಚಾರ ರ್‍ಯಾಲಿಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ, ಖರ್ಗೆ ಕ್ಷೇತ್ರ ಬಿಟ್ಟು ಕದಲುತ್ತಿಲ್ಲ’ ಎಂದು ಪುನರುಚ್ಚರಿಸಿದರು.

‘ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಮುಖ್ಯಮಂತ್ರಿ ಆಗಿದ್ದಾರೆ. ತಮ್ಮ ಪುತ್ರನನ್ನು ಗೆಲ್ಲಿಸಿಕೊಳ್ಳಲು ತಮ್ಮ ಕುಟುಂಬದೊಂದಿಗೆ ಪ್ರಚಾರದಲ್ಲಿ ನಿರತರಾಗಿದ್ದರು. ಖರ್ಗೆ ಕಲಬುರ್ಗಿಗೆ ಸೀಮಿತರಾಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಮಹಾಘಟಬಂಧನ್ ಹೇಗೆ ಯಶಸ್ವಿಯಾಗುತ್ತದೆ’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.

ಸಾಷ್ಟಾಂಗ ನಮಸ್ಕಾರ: ನಗರದ ಯರಗೋಳಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗುಲಬರ್ಗಾ ದಕ್ಷಿಣ ಮಂಡಲ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಡಾ.ಉಮೇಶ ಜಾಧವ ಅವರು ಶಿರಸಾಷ್ಟಾಂಗ ನಮಸ್ಕಾರ ಹಾಕಿ, ತಮ್ಮನ್ನು ಗೆಲ್ಲಿಸುವಂತೆ ಕಳಕಳಿಯ ಮನವಿ ಮಾಡಿಕೊಂಡರು.

ಈಚೆಗೆ ನಡೆದ ವೀರಶೈವ ಲಿಂಗಾಯತ ಸಮಾವೇಶದಲ್ಲೂ ಜಾಧವ ಶಿರಸಾಷ್ಟಾಂಗ ನಮಸ್ಕಾರ ಹಾಕಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.