ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೈಕೋರ್ಟ್‌ನಲ್ಲಿ ಕಾಂಗ್ರೆಸ್–ಬಿಜೆಪಿ ಮತಯಾಚನೆ

Published 15 ಏಪ್ರಿಲ್ 2024, 19:38 IST
Last Updated 15 ಏಪ್ರಿಲ್ 2024, 19:38 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ‌ಚುನಾವಣಾ‌ ಪ್ರಚಾರ‌ದ ಅಂಗವಾಗಿ ಬೆಂಗಳೂರು ಮಹಾನಗರದ ವಿವಿಧ ಕ್ಷೇತ್ರಗಳ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಪರ ಆಯಾ ಪಕ್ಷಗಳ ಅಭ್ಯರ್ಥಿಗಳು, ಮುಖಂಡರು ಸೋಮವಾರ ಹೈಕೋರ್ಟ್‌, ಸಿಟಿ ಸಿವಿಲ್‌ ಕೋರ್ಟ್‌ ಮತ್ತು ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗಳಲ್ಲಿ ಸಂಚರಿಸಿ ವಕೀಲ ವೃಂದದಲ್ಲಿ ಮತ ಯಾಚಿಸಿದರು.

ಕಾಂಗ್ರೆಸ್‌ ಪಕ್ಷದಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯಾ ರೆಡ್ಡಿ,  ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ರಾಜೀವ್‌ ಗೌಡ ಮತ್ತು ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿಖಾನ್‌ ಖುದ್ದು ವಕೀಲರನ್ನು ಭೇಟಿ ಮಾಡಿ ಮತ ಯಾಚಿಸಿದರು. ಇವರ ಪರವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು, ಮಾಧ್ಯಮ ವಕ್ತಾರ ಸೂರ್ಯ ಮುಕುಂದರಾಜ್‌, ಕಾನೂನು ವಿಭಾಗದ ಉಪಾಧ್ಯಕ್ಷ ಎನ್‌.ದಿವಾಕರ್, ಹಿರಿಯ ವಕೀಲ ಎಚ್‌.ಎಸ್.ಚಂದ್ರಮೌಳಿ, ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ ಚಂದ್ರಕಾಂತ ಪಾಟೀಲ ಕಾನೂರು ಸೇರಿದಂತೆ ಹಲವರು ಇದ್ದರು.

ಬಿಜೆಪಿ: ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಪಿ.ಸಿ.ಮೋಹನ್‌ ಅವರೂ ಸ್ವತಃ ಹೈಕೋರ್ಟ್‌ ಮತ್ತು ಸಿಟಿ ಸಿವಿಲ್‌ ಕೋರ್ಟ್‌ಗೆ ಭೇಟಿ ನೀಡಿ ವಕೀಲರಲ್ಲಿ ಮತ ಯಾಚಿಸಿದರು. ಇವರ ಪರವಾಗಿ ಶಾಸಕ ಎಸ್‌.ಸುರೇಶ್‌ ಕುಮಾರ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್‌ ಸುಬ್ಬಾರೆಡ್ಡಿ, ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್‌, ಬಿಜೆಪಿಯ ಕಾನೂನು ಘಟಕದ ಅಧ್ಯಕ್ಷ ವಸಂತ್ ಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT