ಹುಬ್ಬಳ್ಳಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್ಐಆರ್) ಪೂರ್ವ ನಡೆಯುವ ಕುಟುಂಬ ಸದಸ್ಯರ ಮ್ಯಾಪಿಂಗ್ ಸಂದರ್ಭ ನಡೆದ ಗಲಾಟೆ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ.

ಕೇಶ್ವಾಪುರದ ಚಾಲುಕ್ಯ ನಗರದಲ್ಲಿ ಕೆಲ ದಿನಗಳ ಹಿಂದೆ ಬ್ಲಾಕ್ ಮಟ್ಟದ ಅಧಿಕಾರಿ(ಬಿಎಲ್ಒ) ಜೊತೆ ಸಂಬಂಧವಿಲ್ಲದ ವ್ಯಕ್ತಿಗಳು ಸಮೀಕ್ಷೆಗೆ ತೆರಳಿದ್ದರು. ಅದನ್ನು ಪ್ರಶ್ನಿಸಿದ ಅಲ್ಲಿಯ ಕುಟುಂಬ ಹಾಗೂ ಪಾಲಿಕೆ ಕಾಂಗ್ರೆಸ್ ಸದಸ್ಯೆ ಮೇಲೆ ಕೆಲವರು ಹಲ್ಲೆ ಮಾಡಿರುವ ಬಗ್ಗೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು.
.ಬಳ್ಳಾರಿಯಲ್ಲಿ ಗುಂಡು ಹಾರಿಸಿದ ಘಟನೆ: ಸಮೀಪದಿಂದ ಹಾರಿದ ಗುಂಡು– ಉಲ್ಲೇಖ.ಬಳ್ಳಾರಿ ಘರ್ಷಣೆ, ಗುಂಡೇಟು ಪ್ರಕರಣ: 2ನೇ ಶವ ಪರೀಕ್ಷೆಯಲ್ಲಿ ವ್ಯಾಡ್ ಪತ್ತೆ .
ಪಾಲಿಕೆ ಸದಸ್ಯೆ ಸುವರ್ಣ ಕಲಕುಂಟ್ಲ ಅವರ ದೂರು ಆಧರಿಸಿ ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಅವರನ್ನು ಬಂಧಿಸಿದ್ದರು. 'ಆ ವೇಳೆ ಪೊಲೀಸರು ಅವರನ್ನು ವಿವಸ್ತ್ರಗೊಳಿಸಿ ಅವಮಾನ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡರ ಮಾತು ಕೇಳಿ ಅಮಾನುಷವಾಗಿ ವರ್ತಿಸಿದ್ದಾರೆ' ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಮಹೇಶ ಟೆಂಗಿನಕಾಯಿ, 'ಎಸ್ಐಆರ್ ಪೂರ್ವ ನಡೆಯವ ಸಮೀಕ್ಷೆ ಸಂದರ್ಭ ನಮ್ಮ ಪಕ್ಷದ ಕಾರ್ಯಕರ್ತೆ ಸುಜಾತಾ ಹಂಡಿ ಅವರು ಬಿಎಲ್ಒ ಅವರಿಗೆ ಮನೆಗಳನ್ನು ತೋರಿಸಲು ಸಹಾಯ ಮಾಡುತ್ತಿದ್ದರು. ಆಗ ಪಾಲಿಕೆಯ ಕಾಂಗ್ರೆಸ್ ಸದಸ್ಯೆ ಸಮೀಕ್ಷೆಗೆ ಆಕ್ಷೇಪ ವ್ಯಕ್ತಪಡಿಸಿ, ಧಮಕಿ ಹಾಕಿದ್ದರು. ಆ ಪ್ರದೇಶದಲ್ಲಿ ಸಾಕಷ್ಟು ಮಂದಿ ವಲಸಿಗರು ಕಾನೂನು ಬಾಹಿರವಾಗಿ ವಾಸಿಸುತ್ತಿದ್ದಾರೆ. ಅವರು ಮತದಾರರ ಚೀಟಿ ಪಡೆದಿರುವುದು ಬಹಿರಂಗವಾಗುತ್ತದೆ ಎಂದು ಕಾಂಗ್ರೆಸ್ ಗಲಾಟೆ ಮಾಡುತ್ತಿದೆ' ಎಂದು ಆರೋಪಿಸಿದರು.

'ಬಿಜೆಪಿ ಕಾರ್ಯಕರ್ತೆ ಸುಜಾತಾ ವಿರುದ್ಧ ಮೂರು ದಿನಗಳಲ್ಲಿ ನಾಲ್ಕು ಪ್ರಕರಣ ದಾಖಲಿಸಿದ್ದಾರೆ. ಕೇಶ್ವಾಪುರ ಠಾಣೆ ಇನ್ಸ್ಪೆಕ್ಟರ್ ಕೆ.ಎಸ್. ಹಟ್ಟಿ ಅವರು ಕಾಂಗ್ರೆಸ್ ಮುಖಂಡರ ಮಾತು ಕೇಳಿ ಕೆಲಸ ಮಾಡುತ್ತಿದ್ದಾರೆ. ಸುಜಾತಾ ಅವರನ್ನು ಬಂಧಿಸುವ ವೇಳೆ ಪೊಲೀಸರು ಅಮಾನುಷವಾಗಿ ನಡೆದುಕೊಂಡಿದ್ದಾರೆ. ಇದೊಂದು ಅಮಾನವೀಯ ಘಟನೆ. ಇನ್ಸ್ಪೆಕ್ಟರ್ ಸೇರಿದಂತೆ ಇದರಲ್ಲಿ ಭಾಗಿಯಾದ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡಬೇಕು' ಎಂದು ಆಗ್ರಹಿಸಿದರು.

ಪ್ರಕರಣದ ಕುರಿತು ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, 'ಸುಜಾತಾ ಅವರನ್ನು ವಶಕ್ಕೆ ಪಡೆಯುವಾಗ ಅವರೇ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಿಳಾ ಸಿಬ್ಬಂದಿ ಹಾಗೂ ಪುರುಷ ಸಿಬ್ಬಂದಿಯನ್ನು ನೂಕಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ದೊಡ್ಡ ಮಟ್ಟದಲ್ಲಿ ಡ್ರಾಮಾ ಮಾಡಿದ್ದರು. ನಂತರ ಅವರನ್ನು ವಾಹನಕ್ಕೆ ಹತ್ತಿಸಿದಾಗ ತಾವೇ ಬಟ್ಟೆಯನ್ನು ಬಿಚ್ಚಿಕೊಂಡಿದ್ದರು. ಆಗ ನಮ್ಮ ಸಿಬ್ಬಂದಿ ಬೇರೆ ಬಟ್ಟೆ ತಂದು ಕೊಟ್ಟಿದ್ದಾರೆ' ಎಂದರು.

'ಸುಜಾತಾ ಅವರ ವಿರುದ್ಧ 2020ರಿಂದ 2025ರ ಅಂತ್ಯದವರೆಗೆ ವಿವಿಧ ಠಾಣೆಗಳಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ಈ ವರ್ಷ ನಾಲ್ಕು ಪ್ರಕರಣಗಳು ಸೇರಿ ಒಟ್ಟು ಒಂಬತ್ತು ಪ್ರಕರಣಗಳು ದಾಖಲಾಗಿವೆ. ಅವರ ನಡವಳಿಕೆ ಬಗ್ಗೆ ಮಾಹಿತಿಯಿದ್ದ ಹಿನ್ನೆಲೆಯಲ್ಲಿ ಬಂಧನದ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿ ಇದ್ದರು. ನಮ್ಮ ಸಿಬ್ಬಂದಿಗೆ ಹಲ್ಲಿನಿಂದ ಅವರೇ ಕಚ್ಚಿದ್ದಾರೆ. ನಮ್ಮಿಂದ ಯಾವುದೇ ಅಚಾತುರ್ಯ ನಡೆದಿಲ್ಲ' ಎಂದು ಸ್ಪಷ್ಟಪಡಿಸಿದರು.
.ಬಳ್ಳಾರಿ ಗಲಭೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ 26 ಆರೋಪಿಗಳು .ಬಳ್ಳಾರಿ ದೊಂಬಿ ಪ್ರಕರಣ: ಎಫ್ಐಆರ್ನಲ್ಲಿ ಇಲ್ಲದವರ ಸೆರೆ.
'ಶಾಸಕರ ಕುಮ್ಮಕ್ಕಿನಿಂದ ಶಾಂತಿ ಕದಡುವ ಯತ್ನ'

'ಎಸ್ಐಆರ್ ನೆಪದಲ್ಲಿ ಬಿಎಲ್ಒ ಒಬ್ಬರು ಸ್ಥಳೀಯ ಬಿಜೆಪಿ ಕಾರಗಯಕರ್ತರನ್ನು ಕರೆದುಕೊಂಡು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿದ್ದರು. ಆಗ ಆರಂಭವಾದ ಗದ್ದಲದಲ್ಲಿ ಸುಜಾತಾ ಹಂಡಿ ಅವರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಾಗೂ ಪಾಲಿಕೆ ಸದಸ್ಯೆ ಸುವರ್ಣ ಕಲಕುಂಟ್ಲ ಅವರ ಮೇಲೂ ಹಲ್ಲೆಗೆ ಯತ್ನಿಸಿದ್ದರು. ಸಂಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ನಂತರ ಶಾಸಕ ಮಹೇಶ ಟೆಂಗಿನಕಾಯಿ ಅವರು ಸುಜಾತಾ ಅವರ ಮನೆ ಎದುರು ಸಭೆ ನಡೆಸಿ, ಅವರಿಗೆ ನೀವು ಏನು ಬೇಕಾದರೂ ಮಾಟಿ ಎಂದು ಕುಮ್ಮಕ್ಕು ನೀಡಿದ್ದಾರೆ. ಈ ಮೂಲಕ ಹುಬ್ ಹುಳ್ಳಿಯಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ' ಎಂದು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಆರೋಪಿಸಿದ್ದಾರೆ.

ಸುಜಾತಾ ಅವರನ್ನು ವಶಕ್ಕೆ ಪಡೆಯುವಾಗ ಸೆರೆ ಹಿಡಿದ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಯಾರು ಹಂಚಿಕೆ ಮಾಡಿದ್ದಾರೆ ಎಂದು ತನಿಖೆ ನಡೆಸಲಾಗುವುದು. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಬಿಎಲ್ಒ ದೂರು ನೀಡಿಲ್ಲ
ಎನ್. ಶಶಿಕುಮಾರ್, ಪೊಲೀಸ್ ಕಮಿಷನರ್
.ಬಳ್ಳಾರಿ ರೆಡ್ಡಿಗಳ ದೊಂಬಿ ಪ್ರಕರಣ: ಗನ್ಮ್ಯಾನ್ ಸೇರಿ 26 ಮಂದಿ ಬಂಧನ, 6 FIR.ಬಳ್ಳಾರಿ ಘರ್ಷಣೆ: ಸ್ಥಳದಲ್ಲಿದ್ದ ಎಸ್ಪಿ ಪವನ್ ನೆಜ್ಜೂರ್ ವಿಡಿಯೊ ಹರಿದಾಟ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.