ಬಿಜೆಪಿ ಮಾಡಿರುವ ಕಾನೂನುಗಳನ್ನು ಮುಂದಿಡುವೆ: ಡಿಕೆಶಿ
‘ಬಿಜೆಪಿಯವರು ಮಾಡಿರುವ ಕಾನೂನನ್ನು ಒಂದೆರಡು ದಿನಗಳಲ್ಲಿ ನಿಮ್ಮ ಮುಂದಿಡುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ‘ಎಲ್ಲದಕ್ಕೂ ಉತ್ತರ ನೀಡುತ್ತೇನೆ. ಈ ಚುನಾವಣೆ ವೇಳೆ ಮತಯಂತ್ರ ಅಥವಾ ಮತಪತ್ರ ಬಳಕೆ ಮಾಡಬಹುದೆಂದು ಅವರು ಮಾಡಿರುವ ಕಾನೂನಿನಲ್ಲಿದೆ. ಕಾನೂನು ಪ್ರಕಾರ ನಡೆದರೆ ತಪ್ಪೇನಿದೆ’ ಎಂದು ಅವರು ಪ್ರಶ್ನಿಸಿದರು.