ಕುಷ್ಟಗಿ: ‘ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಫಲಿತಾಂಶ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂಘಟನೆಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂಬುದನ್ನು ಎತ್ತಿ ತೋರಿಸಿದೆ. ಅಲ್ಲದೆ ಈ ಫಲಿತಾಂಶ ಭ್ರಷ್ಟ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಿಂದ ಬೀಳ್ಕೊಡುವುದರ ದಿಕ್ಸೂಚಿಯಾಗಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ತಾಲ್ಲೂಕಿನ ಎಂ.ಗುಡದೂರು ಗ್ರಾಮದಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮಾರ್ಗ ಮಧ್ಯೆ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಹೈಕಮಾಂಡ್ ವಿಜಯೇಂದ್ರ ವಿರುದ್ಧ ಕ್ರಮ ಕೈಗೊಂಡರೆ ಮಾತ್ರ ಪಕ್ಷವನ್ನು ರಾಜ್ಯದಲ್ಲಿ ಪುನಃ ಸಂಘಟಿಸಲು ಸಾಧ್ಯ’ ಎಂದರು.

‘ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ, ‘ಕಾಂಗ್ರೆಸ್ ಹಾಗೂ ಇವರಿಬ್ಬರ ಮಧ್ಯೆ ಒಳ ಒಪ್ಪಂದ ಇದೆ. ಅಪ್ಪ ರಾತ್ರಿ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಮತ್ತು ವಿಜಯೇಂದ್ರ ಸಿದ್ದರಾಮಯ್ಯ ಅವರ ನಿವಾಸದಲ್ಲಿರುತ್ತಾರೆ. ಬಿಜೆಪಿ ಹೈಕಮಾಂಡ್ ಈ ವಿಷಯದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಕಾದು ನೋಡಬೇಕು’ ಎಂದರು.

‘ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಜೀವರಾಜ ಅವರ ಗೆಲುವು ನಿಜವಾದದ್ದು, ಆದರೆ ಅಂಚೆ ಮತಗಳನ್ನು ತಿದ್ದುವ ಮೂಲಕ ಬಿಜೆಪಿ ಕ್ರಿಮಿನಲ್ ಸಂಚು ರೂಪಿಸಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪವನ್ನು ತಳ್ಳಿಹಾಕಿದರು. ಇದರಲ್ಲಿ ಯಾವುದೇ ಮೋಸ, ಡಕಾಯಿತಿ ನಡೆದಿಲ್ಲ. ಆದರೆ ಬಾಗಲಕೋಟೆ ಉಪ ಚುನಾವಣೆಯಲ್ಲಿ ವಿವಿಧ ಸಮುದಾಯಗಳಿಗೆ ಹಣ ನೀಡಿ ಮತ ಖರೀದಿಸಿರುವ ಕಾಂಗ್ರೆಸ್ ಪಕ್ಷದ್ದು ಮಾತ್ರ ಅಪ್ಪಟ ಮೋಸ’ ಎಂದು ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-35-92488627

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.