ಪ್ರಭಾವಿ ಸಮುದಾಯಗಳು ಹೋರಾಟಕ್ಕೆ ಇಳಿದಾಗ ಹಿಂದೂ ಜಾತಿಗಳ ಜತೆ ಕ್ರಿಶ್ಚಿಯನ್ ಪದ ಕಾಣದಂತೆ ಮಾಡುವುದಾಗಿ ಹೇಳಿದ್ದರು. ಆದರೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾತಿ ಜತೆ ಕ್ರಿಶ್ಚಿಯನ್ ಎಂದು ಸೇರಿಸಿರುವುದನ್ನು ಕಾಣದಂತೆ ಮಾಡಿಲ್ಲ. ಕ್ರೈಸ್ತರಾಗಿ ಮತಾಂತರ ಹೊಂದಿದವರ ಮೂಲಜಾತಿ ಹಾಗೇ ಉಳಿಯುತ್ತದೆ ಎಂದು ಹೇಳಿದ್ದಾರೆ. ಅದು ಹೇಗೆ ಉಳಿಯಲು ಸಾಧ್ಯ? ಮೂಲಜಾತಿಯಲ್ಲೇ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಮಾಡುತ್ತಾರಂತೆ. ತೀರ್ಮಾನ ಮಾಡಲು ಇವರು ಯಾರು? ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ; ಈ ಆಯೋಗವನ್ನು ಆಯೋಗದಲ್ಲಿ ಇರುವವರೇ ನಡೆಸುತ್ತಿಲ್ಲ