ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಿತು.

‘ಎರಡೂ ವಿಧಾನಸಭಾ ಕ್ಷೇತ್ರಗಳ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ಕಳುಹಿಸಲು ತೀರ್ಮಾನಿಸಲಾಯಿತು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

‘ವಿಧಾನಸಭೆ, ವಿಧಾನಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಒಟ್ಟಾಗಿ ಪ್ರಯತ್ನ ಮಾಡಬೇಕು. ಸಂಪೂರ್ಣ ಶ್ರಮ ಹಾಕಬೇಕೆಂದು ಈ ಸಭೆಯಲ್ಲಿ ತೀರ್ಮಾನ ಆಗಿದೆ. ಪ್ರಲ್ಹಾದ ಜೋಶಿ, ಗೋವಿಂದ ಕಾರಜೋಳ ಮತ್ತು ನಾನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲಾ ಆಕಾಂಕ್ಷಿಗಳು, ಪಕ್ಷದ ಪ್ರಮುಖರ ಜತೆ ಕುಳಿತು ಚರ್ಚಿಸಿ, ಹಿಂದೆ ಆಗಿದ್ದನ್ನು ಮರೆತು ಎಲ್ಲರೂ ಒಗ್ಗಟಾಗಿ ಚುನಾವಣೆ ಎದುರಿಸಬೇಕು ಎಂಬ ತೀರ್ಮಾನ ಆಯಿತು’ ಎಂದರು.

ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್, ಪ್ರಲ್ಹಾದ ಜೋಶಿ, ಆರ್.ಅಶೋಕ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.