ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭಿನ್ನಮತ ತಾರಕಕ್ಕೆ ಏರಿರುವ ಬೆನ್ನಲ್ಲೆ ರಾಷ್ಟ್ರ ನಿಷ್ಠೆ - ಪಕ್ಷ ನಿಷ್ಠೆ ಅತ್ಯಂತ ಶ್ರೇಷ್ಠವಾದದ್ದು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅವರು ದಿವಂಗತ ಅನಂತ್ ಕುಮಾರ್ ಅವರ ಮಾತುಗಳನ್ನು ಸ್ಮರಿಸಿದ್ದಾರೆ.

ನಿಷ್ಠೆ ಎಂಬುದು ಸನ್ನಿವೇಶದ ಅವಶ್ಯಕತೆ ಅಲ್ಲ, ಜೀವನದ ಜೀವಾಳ. ರಾಷ್ಟ್ರ ನಿಷ್ಠೆ - ಪಕ್ಷ ನಿಷ್ಠೆ ಅತ್ಯಂತ ಶ್ರೇಷ್ಠವಾದದ್ದು. ಇವತ್ತಿನ ಬಿಜೆಪಿಯ ಕೆಲವರ ಹೇಳಿಕೆ-ಪ್ರತಿಹೇಳಿಕೆ (ನಿಷ್ಠಾವಂತರ?) ಕೇಳುತ್ತಾ ಹಿರಿಯರಾದ ದಿವಂಗತ ಅನಂತ್ ಕುಮಾರ್ ಅವರು ಹೇಳುತ್ತಿದ್ದ ಮೇಲಿನ ಮಾತುಗಳು ನೆನಪಾದವು ಎಂದು ಪೋಸ್ಟ್ ಹಾಕಿದ್ದಾರೆ.

ಬಸನಗೌಡ ಪಾಟೀಲ ಯತ್ನಾಳ ಅವರು ವಿಜಯೇಂದ್ರ ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದರು. ಕಾಂಗ್ರೆಸ್ನೊಂದಿಗೆ ನಾನು ಒಳಒಪ್ಪಂದ ಮಾಡಿಕೊಂಡಿದ್ದಕ್ಕೆ ದಾಖಲೆಗಳಿದ್ದರೆ ತಕ್ಷಣವೇ ಅವುಗಳನ್ನು ಬಿಡುಗಡೆ ಮಾಡಿ ಎಂದು ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸವಾಲು ಹಾಕಿದರು.

ಯತ್ನಾಳ ಜೊತೆ ರಮೇಶ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಅರವಿಂದ್ ಲಿಂಬಾವಳಿ, ಬಿ.ಪಿ ಹರೀಶ್, ಪ್ರತಾಪ್ ಸಿಂಹ ಅವರು ಸೇರಿಕೊಂಡಿದ್ದಾರೆ.

ವಿಜಯೇಂದ್ರ ಬಣದಲ್ಲಿ ಬಿ.ಸಿ.ಪಾಟೀಲ, ಎಂ.ಪಿ.ರೇಣುಕಚಾರ್ಯ ಸೇರಿ ಮುಂತಾದವರು ಇದ್ದಾರೆ.
.ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೆ: ಯತ್ನಾಳ ಬಣದ ಮೇಲೆ ಮುಗಿಬಿದ್ದ ವಿಜಯೇಂದ್ರ ಬಣ.ಕಲಬುರಗಿ: ಭಿನ್ನಮತ ಶಮನಕ್ಕೆ ಮುಂದಾದ ಬಿಜೆಪಿ ನಾಯಕರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.