ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಜುಲೈ 4ರಂದು ಬಿಜೆಪಿ ಕಾರ್ಯಕಾರಿಣಿ ಸಭೆ

Published 30 ಜೂನ್ 2024, 15:41 IST
Last Updated 30 ಜೂನ್ 2024, 15:41 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಜುಲೈ 4 ರಂದು ಅರಮನೆ ಮೈದಾನದ ವೈಟ್‌ ಪೆಟಲ್ಸ್‌ ಸಭಾಂಗಣದಲ್ಲಿ ನಡೆಯಲಿದೆ.

ಸಭೆಯನ್ನು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಉದ್ಘಾಟಿಸುವರು. ವಿರೋಧಪಕ್ಷದ ನಾಯಕ ಆರ್‌.ಅಶೋಕ. ಕೇಂದ್ರ ಸಚಿವರು, ಸಂಸದರು ಮತ್ತು ಶಾಸಕರು ಭಾಗವಹಿಸಲಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ತಿಳಿಸಿದರು.

ಕೇಂದ್ರದಲ್ಲಿ ಎನ್‌ಡಿಎ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಪ್ರಧಾನಿಯವರನ್ನು ಇದೇ ವೇಳೆ ಅಭಿನಂದನೆ ಸಲ್ಲಿಸಲಾಗುವುದು. ರಾಜ್ಯ ಸರ್ಕಾರದ ವೈ‍ಫಲ್ಯವನ್ನು, ಭ್ರಷ್ಟಾಚಾರ, ದರ ಏರಿಕೆಯನ್ನು ಖಂಡಿಸುವ ಇನ್ನೊಂದು ನಿರ್ಣಯವನ್ನೂ ಅಂಗೀಕರಿಸುತ್ತೇವೆ. ಪಕ್ಷ ಸಂಘಟನೆ ಕುರಿತು ಚರ್ಚಿಸಲಿದ್ದೇವೆ ಎಂದು ವಿವರಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT