ಬೆಂಗಳೂರು: ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಇದೇ 7 ರಿಂದ 12 ರವರೆಗೆ ‘ಹಳ್ಳಿಗೆ ನಡೆಯಿರಿ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.

ಪಕ್ಷದ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ, ಬಿಜೆಪಿ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ಹಳ್ಳಿಗೆ ನಡೆಯಿರಿ’ ಕಾರ್ಯಕ್ರಮ ವನ್ನು ದೊಡ್ಡ ರೀತಿಯಲ್ಲಿ ಆಯೋಜಿಸ ಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಹಮ್ಮಿಕೊಳ್ಳಲಾಗಿದೆ. ಪಕ್ಷಕ್ಕಾಗಿ ದುಡಿದವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ ನಡೆಸಲಾಗುವುದು. ಇದೇ ವೇಳೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಂಪರ್ಕ ಅಭಿಯಾನವನ್ನೂ ಮಾಡಲಾಗುವುದು ಎಂದು ಹೇಳಿದರು.

‘1975 ರಲ್ಲಿ ಇಂದಿರಾಗಾಂಧಿ ಯವರ ದುರಾಡಳಿತ ಮತ್ತು ಸರ್ವಾಧಿಕಾರದಿಂದ ತುರ್ತುಪರಿಸ್ಥಿತಿ ಬಂತು. ಅದನ್ನು ವಿರೋಧಿಸಿ ಜನಸಂಘವು ಜನತಾ ಪಕ್ಷದಲ್ಲಿ ವಿಲೀನವಾಯಿತು. 1980 ರಲ್ಲಿ ಜನಸಂಘ ಜನತಾಪಕ್ಷದಿಂದ ಹೊರಬಂದು ಬಿಜೆಪಿಯನ್ನು ಸ್ಥಾಪಿಸಲಾಯಿತು. ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ ಅವರು ಪಕ್ಷದ ನೇತೃತ್ವ ವಹಿಸಿದ್ದರು. ಈಗ ಪಕ್ಷ ಆಲದ ಮರದ ರೀತಿ ಇಡೀ ದೇಶದಲ್ಲಿ ವ್ಯಾಪಿಸಿದೆ. ಅತಿದೊಡ್ಡ ಪಕ್ಷದ ಸದಸ್ಯ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-51-1689697915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.