ಬೆಂಗಳೂರು:ಬಿ.ಎಸ್ಯಡಿಯೂರಪ್ಪ ಅವರುಪಕ್ಷದಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರ ವಿರುದ್ಧ ಧ್ವನಿ ಎತ್ತಿದ ಕಾರಣಕ್ಕೆ ಪಕ್ಷದ ಸ್ಥಾನ ಕಳೆದುಕೊಂಡಿದ್ದವರಿಗೆ ಈಗಿನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರುಮತ್ತೆ ಜವಾಬ್ದಾರಿ ನೀಡಿದ್ದಾರೆ. ಈ ಮೂಲಕಬಿಜೆಪಿಯಲ್ಲಿ ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷರ ನಡುವಿನ ಅಧಿಕಾರಸಮರ ಮತ್ತೊಂದು ಮಜಲು ತಲುಪಿದೆ.

ಇದನ್ನೂ ಓದಿ:ಬಿಜೆಪಿ ಅತೃಪ್ತರಿಂದ ಬಿಎಸ್ವೈಗೆ ಎಚ್ಚರಿಕೆ

ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನ ಮತ್ತು ವಿಧಾನಪರಿಷತ್ನ ಮಾಜಿ ಸದಸ್ಯ ಎಂ.ಬಿಭಾನುಪ್ರಕಾಶ್ ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ನಳೀನ್ ಕುಮಾರ್ ಗುರುವಾರ ನೇಮಿಸಿದರು.ಆದರೆ, ಈ ಇಬ್ಬರೂ ಯಡಿಯೂರಪ್ಪ ಅವರು ಪಕ್ಷದ ಅಧ್ಯಕ್ಷರಾಗಿದ್ದ ವೇಳೆ ಅವರ ವಿರುದ್ಧ ದನಿ ಎತ್ತಿದ್ದವರು.

ಇದನ್ನೂ ಓದಿ: ಶಿವಮೊಗ್ಗ: ಬಿಜೆಪಿ ಭಿನ್ನಮತ ಸ್ಪೋಟ, ಯಡಿಯೂರಪ್ಪ ವಿರುದ್ಧ ಹರಿಹಾಯ್ದ ಭಾನುಪ್ರಕಾಶ್

ಪಕ್ಷದ ಕೆಲ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರನ್ನು ಬದಲಿಸುವ ವಿಚಾರದಲ್ಲಿ ಆಗುತ್ತಿದ್ದ ವಿಳಂಬದಿಂದಾಗಿ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನ ಎರಡು ವರ್ಷಗಳ ಹಿಂದೆ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು. ಪತ್ರಿಕಾಗೋಷ್ಠಿ ಕರೆದು ಅಸಮಾಧಾನ ಹೊರ ಹಾಕಿದ್ದರು. ಅಲ್ಲದೆ, ಪರಿಸ್ಥಿತಿ ಹೀಗೆ ಮುಂದುವರಿದರೆ ದೆಹಲಿ ನಾಯಕರಿಗೆ ವಿಚಾರ ಮುಟ್ಟಿಸುವುದಾಗಿ ಎಚ್ಚರಿಸಿದ್ದರು.

ಇದನ್ನೂ ಓದಿ:‘ಭಾನುಪ್ರಕಾಶ್, ಸುರಾನಾ ಹೆಚ್ಚಿನ ಜವಾಬ್ದಾರಿ’

ಬಿ.ಎಸ್ ಯಡಿಯೂರಪ್ಪ ಅವರು ಕೆಜೆಪಿಯಿಂದ ಬಿಜೆಪಿಗೆ ಬಂದ ನಂತರ ಎಲ್ಲರನ್ನೂ ವಿಶ್ವಾಸದಿಂದ ಕಾಣುತ್ತಿಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ಅವರು ಆರೋಪಿಸಿದ್ದರು. 2017ರಲ್ಲಿ ಅವರನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದಲೂ ತೆಗೆದು ಹಾಕಲಾಗಿತ್ತು. ನಂತರ ಅವರನ್ನುಮರಳಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತಾದರೂ, ಸ್ಥಾನವನ್ನು ಅವರು ನಿರಾಕರಿಸಿದ್ದರು.

ಇದನ್ನೂ ಓದಿ: ಬಿ.ಎಲ್. ಸಂತೋಷ್ ತಂಡ ಅಂಡಮಾನ್ಗೆ

ಈ ಮಧ್ಯೆ ಇಬ್ಬರೂ ಮುಖಂಡರನ್ನು ಸಮಾಧಾನಪಡಿಸುವ ಪ್ರಯತ್ನಗಳು ನಡೆದಿದ್ದವು. ಆದರೆ, ಯಾವುದೂ ಸಫಲವಾಗಿರಲಿಲ್ಲ. ಇದೀಗ ನಳೀನ್ ಕುಮಾರ್ ಕಟೀಲ್ ಅವರು ಇಬ್ಬರನ್ನೂ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ನೇಮಿಸಿದ್ದಾರೆ.

ಬಿಬಿಎಂಪಿ ಮೇಯರ್ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ ಅವರು ಹಿರಿಯ ಶಾಸಕ ರಘು ಅವರ ನೇತೃತ್ವದಲ್ಲಿ ಆಂತರಿಕ ಸಮಿತಿ ರಚನೆ ಮಾಡಿದ್ದರು. ಇದರ ಬೆನ್ನಿಗೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಪಕ್ಷದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಂಥ ಯಾವುದೇ ಸಮಿತಿ ರಚನೆ ಮಾಡಿಲ್ಲ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.