ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ನೆಲೆ ಕಂಡುಕೊಳ್ಳಲು ಜನರನ್ನು ಬಿಜೆಪಿ ಎತ್ತಿಕಟ್ಟುತ್ತಿದೆ: ಡಿಕೆಶಿ

Published 29 ಜನವರಿ 2024, 16:05 IST
Last Updated 29 ಜನವರಿ 2024, 16:05 IST
ಅಕ್ಷರ ಗಾತ್ರ

ಬೆಂಗಳೂರು: ‘ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲದ ಬಿಜೆಪಿ ಅಸ್ತಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದರು.

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ವಿಚಾರವಾಗಿ ಎದ್ದಿರುವ ವಿವಾದದ ಕುರಿತು ಸುದ್ದಿಗಾರರ ಜೊತೆ ಸೋಮವಾರ  ಮಾತನಾಡಿದ ಅವರು, ‘ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡುವುದು ನಮ್ಮ ಆದ್ಯತೆ’ ಎಂದರು.

‘ಬಿಜೆಪಿ ಅಭ್ಯರ್ಥಿಗಳು ಅನೇಕ ಕಡೆಗಳಲ್ಲಿ ಠೇವಣಿ ಕಳೆದುಕೊಂಡಿರುವ ಕಾರಣ ಜೆಡಿಎಸ್ ಜತೆ ಸೇರಿಕೊಂಡಿದ್ದಾರೆ. ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಇಂಥ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಅದರಿಂದ ಏನೂ ಪ್ರಯೋಜನವಿಲ್ಲ. ಮಂಡ್ಯದ ಜನರು ಸಹಿಷ್ಣುತೆ ಉಳ್ಳವರು, ಜಾತ್ಯತೀತರು. ಇಂಥ ವಿಚಾರಗಳಿಗೆ ಮಾರು ಹೋಗುವುದಿಲ್ಲ’ ಎಂದರು.

‘ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ’ ಎಂಬ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ಯಾರು ಹಿಂದೂ ವಿರೋಧಿ? ನಾವೆಲ್ಲರೂ ಮೊದಲು ಭಾರತೀಯರು.‌ ಅಲ್ಲಿನ ದಲಿತ ಸಂಘರ್ಷ ಸಮಿತಿ, ಕೆಂಪೇಗೌಡ ಸಮಿತಿ ಸೇರಿದಂತೆ ಅನೇಕರು ನಾವು ಬಾವುಟ ಹಾಕುತ್ತೇವೆ ಎಂದು ಕೇಳುತ್ತಿದ್ದಾರೆ. ನಾವೆಲ್ಲರೂ ಹಿಂದೂಗಳಲ್ಲವೇ? ನಮ್ಮ ಹಳ್ಳಿಯಲ್ಲಿರುವ ಜನ ಹಿಂದೂಗಳಲ್ಲವೇ? ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT