ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಸೆ.8ರಂದು (ಗುರುವಾರ) ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ಸೆ. 11ಕ್ಕೆ ಮುಂದೂಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ವಿ. ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ಈ ಹಿನ್ನೆಲೆಯಲ್ಲಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲು ಸರ್ಕಾರ ತೀರ್ಮಾನಿಸಿದೆ.

ಇದರೊಂದಿಗೆ ಸತತ ಎರಡನೇ ಬಾರಿಗೆಜನೋತ್ಸವ ಕಾರ್ಯಕ್ರಮವನ್ನುಮುಂದೂಡಿದಂತಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಜನಪರ ಯೋಜನೆಗಳ ಬಗ್ಗೆ ಜನತೆಗೆ ತಿಳಿಸುವ ಉದ್ದೇಶದಿಂದ ರಾಜ್ಯದಲ್ಲಿ 7 ಕಡೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ದೊಡ್ಡಬಳ್ಳಾಪುರದಲ್ಲಿ ನಾಳೆ ಮೊದಲ ಜನೋತ್ಸವ ಕಾರ್ಯಕ್ರಮ ನಡೆಯಬೇಕಿತ್ತು.

ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇವನ್ನೂ ಓದಿ...

Umesh Katti| ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ

ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಉಮೇಶ್ ಕತ್ತಿ ನಿಧನ| ಶಾಂತವಾಯಿತು ‘ಉತ್ತರ’ದ ಧ್ವನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.