ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಹಿತಕ್ಕಿಂತ ಕುಟುಂಬದ ಹಿತವೇ ಮುಖ್ಯವೇ: JDSಗೆ ಕಾಂಗ್ರೆಸ್‌ ಪ್ರಶ್ನೆ

Published 23 ಸೆಪ್ಟೆಂಬರ್ 2023, 8:09 IST
Last Updated 23 ಸೆಪ್ಟೆಂಬರ್ 2023, 8:09 IST
ಅಕ್ಷರ ಗಾತ್ರ

ಬೆಂಗಳೂರು: ಜಾತ್ಯಾತೀತ ಮತದಾರರ ಹಿತಕ್ಕಿಂತ ಕುಟುಂಬದ ಹಿತವೇ ಮುಖ್ಯವಾಯಿತೆ ಎಂದು ಕಾಂಗ್ರೆಸ್‌, ಜೆಡಿಎಸ್‌ ವಿರುದ್ಧ ಪ್ರಶ್ನಿಸಿದೆ.

ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್‌, ಕೇವಲ ಕುಟುಂಬದ ಹಿತಾಸಕ್ತಿಗಾಗಿ ಜಾತ್ಯಾತೀತತೆಯನ್ನು ವಿಸರ್ಜಿಸಿರುವ ಜೆಡಿಎಸ್ ತನ್ನ ಅಲ್ಪಸಂಖ್ಯಾತ ಮತದಾರರಿಗೆ ಏನೆಂದು ಉತ್ತರಿಸುತ್ತದೆ?, ಬಿಜೆಪಿಯ ಅಲ್ಪಸಂಖ್ಯಾತ ಹಾಗೂ ದಲಿತ ವಿರೋಧಿ ನೀತಿಗಳಿಗೆ ಜೆಡಿಎಸ್‌ನ ಸಮ್ಮತಿಯೂ ಇದೆಯೇ?, ಹಿಂದೆ ಜೆಡಿಎಸ್ ಪಕ್ಷದಲ್ಲೇ ಇದ್ದ ಸಂಸದ ಡ್ಯಾನಿಷ್ ಅಲಿ ಅವರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿದ ಬಿಜೆಪಿ ಸಂಸದನ ಮಾತನ್ನು ಜೆಡಿಎಸ್ ಕೂಡ ಅನುಮೋದಿಸುತ್ತದೆಯೇ?, ಜಾತ್ಯಾತೀತ ಮತದಾರರ ಹಿತಕ್ಕಿಂತ ಕುಟುಂಬದ ಹಿತವೇ ಮುಖ್ಯವಾಯಿತೇ ಎಂದು ಕೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT