ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸದ್ಯದಲ್ಲೇ ಕಾಂಗ್ರೆಸ್ ಸರ್ಕಾರ ಮನೆಗೆ: ಯಡಿಯೂರಪ್ಪ

Published : 10 ಆಗಸ್ಟ್ 2024, 9:15 IST
Last Updated : 10 ಆಗಸ್ಟ್ 2024, 9:15 IST
ಫಾಲೋ ಮಾಡಿ
Comments

ಮೈಸೂರು: ನನ್ನ ಬದುಕಿನ ಕೊನೆಯ ಉಸಿರು ಇರುವರೆಗೂ ರಾಜಕೀಯದಲ್ಲಿ ಇದ್ದು ನಿಮ್ಮನ್ನು ಮನೆಗೆ ಕಳಿಸುವ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಗುಡುಗಿದರು.

ಮೈಸೂರು ಚಲೋ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಇಡೀ ಸರ್ಕಾರ ದಿವಾಳಿ ಆಗಿದೆ. ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಶಿವಕುಮಾರ್ ತಾನು ಕಲ್ಲುಬಂಡೆ ಎನ್ನುತ್ತಾರೆ. ವಿಜಯೇಂದ್ರ, ಅಶೋಕರನ್ನು ಏಕವಚನದಲ್ಲಿ ಮಾತನಾಡಿದ್ದಾರೆ. ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಿದೆ. ಯಾವಾಗ ಏನು ಆಗುತ್ತದೋ ಗೊತ್ತಿಲ್ಲ. ಮೊದಲು ನಿಮ್ಮ ಭವಿಷ್ಯದ ಕಡೆಗೆ ಗಮನ ಕೊಡಿ ಎಂದರು.‌

ಹಿಂದಿನ ಯಾವ ಮುಖ್ಯಮಂತ್ರಿ ಕೂಡ ತನ್ನ ಕುಟುಂಬಕ್ಕೆ ನಿವೇಶನ ಕೊಟ್ಟಿಲ್ಲ. ಇದು ಯಾರ ಅಪ್ಪನ ಮನೆ ದುಡ್ಡು? ಇಷ್ಟಾದರೂ ಪ್ರಾಮಾಣಿಕ ಎನ್ನುತ್ತೀರಿ. ಇಂತಹ ಸಿ.ಎಂ. ಡಿಸಿಎಂ ರಾಜ್ಯದಲ್ಲಿ ಇರುವವರೆಗೆ ಅಭಿವೃದ್ಧಿ ಸಾಧ್ಯ ಇಲ್ಲ‌. ರಾಜ್ಯದ ಜನ ಬೇಗ ನಿಮ್ಮನ್ನು ಮನೆಗೆ ಕಳುಹಿಸುತ್ತಾರೆ‌. ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ. ಈಗಲೂ ಚುನಾವಣೆ ನಡೆದರೆ ಬಿಜೆಪಿ 130- 140 ಸ್ಥಾನ ಗೆಲ್ಲಲಿದೆ ಎಂದು ನುಡಿದರು.

ಈ ಪಾದಯಾತ್ರೆ ನಿಮ್ಮನ್ನು ಮನೆಗೆ ಕಳುಹಿಸುವರೆಗೂ ನಿಲ್ಲದು. 82 ವರ್ಷ ಆಗಿದ್ದರೂ ರಾಜ್ಯದ ಉದ್ದಗಲ‌ ಓಡಾಡುತ್ತೇನೆ ಎಂದರು.

ಮೋದಿ, ದೇವೇಗೌಡರ ಬಗ್ಗೆಯೂ ಹಗುರವಾಗಿ ಮಾತನಾಡುತ್ತೀರಿ. ಇದು ನಿಮಗೆ ಶೋಭೆ ತರುವುದಿಲ್ಲ. ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ- ಜೆಡಿಎಸ್ ಸರ್ಕಾರ ತರಲು ಜನ ಕಾರಣಕರ್ತರಾಗಬೇಕಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT