ಬೆಂಗಳೂರು: ಶಾಸಕರು ಲಾಭದಾಯಕ ಹುದ್ದೆ ಹೊಂದಿದ ಕಾರಣಕ್ಕೆ ಅವರು ಅನರ್ಹರಾಗದಂತೆ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಂಡಿಸಿದ ‘ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ಮಸೂದೆ–2024’ಕ್ಕೆ ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಮಸೂದೆಗೆ ಅಂಗೀಕಾರ ಕೋರುತ್ತಿದ್ದಂತೆ, ‘ಈ ಮಸೂದೆ ಅನರ್ಹತೆಯ ನಿವಾರಣೆ ಅಲ್ಲ; ಅನರ್ಹರಿಗೆ ಅರ್ಹತೆ ಕೊಡುವ ಮಸೂದೆ’ ಎಂದು ಬಿಜೆಪಿಯ ಎಸ್. ಸುರೇಶ್ ಕುಮಾರ್ ವ್ಯಂಗ್ಯ ಮಾಡಿದರು.

ವಿಧಾನಸಭೆ ಅಥವಾ ವಿಧಾನ ಪರಿಷತ್ನ ಸದಸ್ಯರಾಗಿರುವವರು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ–1 ಮತ್ತು ಕಾರ್ಯದರ್ಶಿ–2 , ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ, ಮುಖ್ಯಮಂತ್ರಿಯ ಸಲಹೆಗಾರ (ನೀತಿ ಮತ್ತು ಯೋಜನೆ) ಮತ್ತು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನೆ ಆಯೋಗದ ಉಪಾಧ್ಯಕ್ಷರ ಹುದ್ದೆಗೆ ನೇಮಕಗೊಂಡರೆ ಅನರ್ಹರಾಗುವುದರಿಂದ ವಿನಾಯಿತಿ ನೀಡಲು ಈ ಮಸೂದೆಯನ್ನು ಮಂಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.