ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಯುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ‘ಮೊದಲ ದಿನ ಯಶಸ್ವಿಯಾಗಿದೆ. ಆದರೆ, ಕೊನೆಯ ಹಂತದ ಸಿದ್ಧತೆಯಲ್ಲಿ ಸ್ವಲ್ಪ ವ್ಯತ್ಯಾಸವಾದ ಕಾರಣ ಮೊದಲ ದಿನ ನಿರೀಕ್ಷೆಯಷ್ಟು ಜನರು ಸೇರಲಿಲ್ಲ. ಬಿಡದಿಯಿಂದ ಭಾನುವಾರ ಹೊರಡುವ ಪಾದಯಾತ್ರೆ ಭಿನ್ನವಾಗಿರಲಿದೆ. ರಾಮನಗರ ಭಾಗದ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಈ ಯಾತ್ರೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಜನಾಂದೋಲನವಾಗಿ ರೂಪುಗೊಳ್ಳಲಿದೆ’ ಎಂದರು.