ನವದೆಹಲಿ: ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರನ್ನು ಇಲ್ಲಿ ಭೇಟಿ ಮಾಡಿ ಸಮಾಲೋಚಿಸಿದರು.

‘ಕುಟುಂಬ ಹಾಗೂ ಹೊಂದಾಣಿಕೆ ರಾಜಕಾರಣ ಮಾಡುತ್ತಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಿಸಬೇಕು’ ಎಂದು ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣ ಪಟ್ಟು ಹಿಡಿದಿದೆ. ಪಕ್ಷದ ಆಂತರಿಕ ವಿಷಯಗಳ ಬಗ್ಗೆ ಹೇಳಿಕೆ ನೀಡಿ ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಯತ್ನಾಳ ಅವರನ್ನು ಪಕ್ಷದಿಂದ ಆರು ವರ್ಷಗಳ ಅವಧಿಗೆ ಹೊರ ಹಾಕಲಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಚುನಾವಣೆ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳುವ ಸಂಭವ ಇದೆ. ಅದೇ ಹೊತ್ತಿನಲ್ಲಿ, ಬೆಲ್ಲದ ಅವರು ವರಿಷ್ಠರನ್ನು ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ನಾಯಕರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬುದು ಪಕ್ಷದ ತಟಸ್ಥ ಬಣದ ಒತ್ತಾಯ. ತಟಸ್ಥ ಬಣದಲ್ಲಿ ಬೆಲ್ಲದ ಗುರುತಿಸಿಕೊಂಡಿದ್ದಾರೆ.

‘ಮುಡಾ ಹಗರಣ, ವಾಲ್ಮೀಕಿ ಹಗರಣ, ವಕ್ಫ್ ಹಾಗೂ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆಸಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಅವಕಾಶಗಳಿದ್ದವು. ಈ ಹೋರಾಟವನ್ನು ಒಂದೆರಡು ದಿನಗಳಿಗೆ ಸೀಮಿತಗೊಳಿಸಲಾಗಿತ್ತು. ಪದೇ ಪದೇ ಅವಕಾಶಗಳನ್ನು ಕೈಚೆಲ್ಲಲಾಗುತ್ತಿದೆ. ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರುದ್ಧವೂ ನಡೆದಿರುವುದು ಕಾಟಾಚಾರದ ಹೋರಾಟ. ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಜಯೇಂದ್ರ ರಣತಂತ್ರ ಹೆಣೆಯುತ್ತಿಲ್ಲ. ಇದರಿಂದಾಗಿ, ಕಾರ್ಯಕರ್ತರಲ್ಲೂ ಗೊಂದಲ ಸೃಷ್ಟಿಯಾಗಿದೆ’ ಎಂದು ಅವರು ವರಿಷ್ಠರ ಗಮನಕ್ಕೆ ತಂದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಮಾಡುವುದಿದ್ದರೆ ತಮ್ಮನ್ನು ಪರಿಗಣಿಸಬೇಕು ಎಂದು ಅವರು ಕೋರಿದರು. ‘ಖಾಸಗಿ ಕಾರ್ಯನಿಮಿತ್ತ ನವದೆಹಲಿಗೆ ಬಂದಿದ್ದೇನೆ’ ಎಂದು ಬೆಲ್ಲದ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.