ಅಮಿತ್ ಶಾ ಅವರು ಸಂಸತ್ತಿನಲ್ಲಿ ಬಾಯಿತಪ್ಪಿ ಆಡಿದ ಮಾತನ್ನೇ ಕಾಂಗ್ರೆಸ್ ದೊಡ್ಡದು ಮಾಡುತ್ತಿದೆ. ಅದಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆಗೆ ಕುಮ್ಮಕ್ಕು ನೀಡಿದೆ.
–ಎನ್.ಮಹೇಶ್ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ
ಪಲ್ಲಕ್ಕಿ ಮೆರವಣಿಗೆ
ಸಂವಿಧಾನ ದಿನಾಚರಣೆಯ ಭಾಗವಾಗಿ ಸಮಿತಿಯ ಸದಸ್ಯರು ಮತ್ತು ಕಾರ್ಯಕರ್ತರು ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ವಿಧಾನಸೌಧದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಿದರು. ಅಂಬೇಡ್ಕರ್ ಅವರ ಭಾವಿಚಿತ್ರವಿದ್ದ ಮೋಟರು ಪಲ್ಲಕ್ಕಿ ಡೊಳ್ಳಿನ ಕುಣಿತ ಮತ್ತು ಜನಪದ ನೃತ್ಯಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದವು. ಮೆರವಣಿಗೆಯಲ್ಲಿ ಭಾಗಿಯಾಗಿದ್ದ ನೂರಾರು ಜನರು ‘ಜೈ ಭೀಮ್. ಜೈ ಜೈ ಭೀಮ್’ ಎಂದು ಘೋಷಣೆ ಕೂಗಿದರು.