ಮಡಿಕೇರಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕೊಡಗು ಜಿಲ್ಲೆಯ ಸೋಮವಾರಪೇಟೆ ಹಾಗೂ ಸುಂಟಿಕೊಪ್ಪದಲ್ಲಿ ಪರಿಶೀಲನೆ ನಡೆಸಿದೆ.

ಗುರುವಾರ ನಸುಕಿನಲ್ಲಿ ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಬ್ಬರ ಮನೆ ಹಾಗೂ ಸುಂಟಿಕೊಪ್ಪದಲ್ಲಿ ಒಬ್ಬರ ಮನೆ ಮೇಲೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳ ತಂಡ ದಾಖಲಾತಿಗಳನ್ನು ಪರಿಶೀಲನೆ ನಡೆಸಿ, ಮನೆಯವರ ವಿಚಾರಣೆ ನಡೆಸಿ ತೆರಳಿದೆ.

ಸದ್ಯಕ್ಕೆ ಯಾವುದೇ ವ್ಯಕ್ತಿಯನ್ನೂ ಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗೆ ಕೊಡಗಿನ ಸಂಪರ್ಕವಿದ್ದು, ಹಾಗಾಗಿ ಇಂತಹ ದಾಳಿಗಳು ನಡೆಯುತ್ತಿವೆ ಎಂದು ಮೂಲಗಳು ಹೇಳಿವೆ.

ರಾಜ್ಯದ 16 ಕಡೆಗಳಲ್ಲಿ ಎನ್ಐಎ ದಾಳಿ...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡುಗು ಸೇರಿದಂತೆ ರಾಜ್ಯದ 16 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ ಎಂದು ಪಿಟಿಐ ವರದಿ ಮಾಡಿದೆ.
.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇಸ್ ಡೈರಿ ಪ್ರತಿ ಪುಟಕ್ಕೂ ಸಹಿ;ಮೇಲ್ಮನವಿ ವಜಾ.ಪ್ರವೀಣ್ ನೆಟ್ಟಾರು ಹತ್ಯೆ: ದೋಷಾರೋಪಣಾ ಪಟ್ಟಿ ಸಲ್ಲಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.