ಬೆಂಗಳೂರು: ವಿಧಾನಪರಿಷತ್‌ನಬಿಜೆಪಿ ಸದಸ್ಯ ಪುಟ್ಟಣ್ಣ ಅವರು ಪಕ್ಷದ ನಡಾವಳಿಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ.
‘ಪಕ್ಷವನ್ನು ಅಧಿಕಾರಕ್ಕೆ ತರಲು ತಮ್ಮನ್ನು ಮತ್ತು ಸಿ.ಪಿ.ಯೋಗೇಶ್ವರ ಅವರನ್ನು ಚೆನ್ನಾಗಿ ಬಳಸಿಕೊಂಡರು. ಆ ಬಳಿಕ ತಮ್ಮನ್ನು ಮರೆತದ್ದೂ ಅಲ್ಲದೇ ನಿರ್ಲಕ್ಷಿಸುತ್ತಿದ್ದಾರೆ’ ಎಂದು ಪುಟ್ಟಣ್ಣ ಅವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.
‘ಈ ಕಾರಣಕ್ಕಾಗಿ ಪುಟ್ಟಣ್ಣ ಅವರು ಸದ್ಯಕ್ಕೆ ತಟಸ್ಥರಾಗಿ ಉಳಿದಿದ್ದಾರೆ. ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದರಿಂದ, ಮುಂದಿನ ದಿನಗಳಲ್ಲಿ ಆ ಪಕ್ಷ ಸೇರುವ ಬಗ್ಗೆ ಒಲವು ಹೊಂದಿದ್ದಾರೆ’ ಎಂದು ಅವರ ಆಪ್ತ ವಲಯ ಹೇಳಿದೆ.
ಪುಟ್ಟಣ್ಣ ಅವರು 2019 ರಲ್ಲಿ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದರು. ವಿಧಾನಪರಿಷತ್‌ನ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದಿದ್ದರು.
ಜೆಡಿಎಸ್‌ನಿಂದ ವಲಸೆ ಬಂದು ವಿಧಾನಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್ ಅವರು ಕಾಂಗ್ರೆಸ್ ಸೇರಲು ತೀರ್ಮಾನ ಪ್ರಕಟಿಸಿದ ಬೆನ್ನಲ್ಲೇ ಪುಟ್ಟಣ ಅವರೂ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.