ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ BJP ನಾಯಕರಿಂದ ದೆಹಲಿಗೆ ಬುಲಾವ್: ನಿಖಿಲ್

Published 16 ಫೆಬ್ರುವರಿ 2024, 10:36 IST
Last Updated 16 ಫೆಬ್ರುವರಿ 2024, 10:36 IST
ಅಕ್ಷರ ಗಾತ್ರ

ರಾಮನಗರ: ಲೋಕಸಭಾ ಚುನಾವಣೆಯ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಂಬಂಧಿಸಿದಂತೆ, ಬಿಜೆಪಿ ವರಿಷ್ಠರು ದೆಹಲಿಗೆ ಕರೆದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನೂ ಕೂಡಾ ದೆಹಲಿಗೆ ಹೋಗುತ್ತಿದ್ದೇನೆ. ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಿ, 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡಲಾಗುತ್ತದೆ ಎಂದರು.

ಚುನಾವಣೆ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದ ಪಕ್ಷದ ಎಲ್ಲಾ ಮುಖಂಡರನ್ನ ಕರೆದು ಸಭೆ ಮಾಡಿದ್ದೇನೆ. ಶೀಘ್ರದಲ್ಲೇ ಆ ಭಾಗದ ಎಲ್ಲಾ ತಾಲ್ಲೂಕುಗಳಿಗೂ ಪ್ರವಾಸ ಮಾಡುವೆ. ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ತಂತ್ರಗಾರಿಕೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ನಾನು ಮಂಡ್ಯದಿಂದ ಸ್ಪರ್ಧೆ ಮಾಡಬೇಕು ಎಂದು ಅಲ್ಲಿನ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು 5 ಲಕ್ಷಕ್ಕಿಂತ ಅಧಿಕ ಮತಗಳನ್ನು ಕೊಟ್ಟಿದ್ದಾರೆ. ಅಲ್ಲಿನ ಜನತೆಗೆ ನಾನು ಚಿರರುಣಿಯಾಗಿರುವೆ. ಮತ್ತೆ ಸ್ಪರ್ಧಿಸುವ ಕುರಿತು ಮುಂದೆ ಚರ್ಚಿಸೋಣ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಹೋರಾಟ ಮಾಡಬೇಕಿದೆ. ರಾಜ್ಯದ 28 ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಮೋದಿ ಅವರಿಗೆ ಉಡುಗೊರೆ ನೀಡಲಿದ್ದೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT